ಮನೆಯಲ್ಲೂ ಹನುಮಧ್ವಜ ಹಾರಿಸಲು ಕರೆ ನೀಡಿದ ಬಿಜೆಪಿ

Prasthutha|

ಬೆಂಗಳೂರು ಮಂಡ್ಯದಲ್ಲಿ ರಾಷ್ಟ್ರ ಧ್ವಜ ಹಾರಾಡಿಸಲು ಅನುಮತಿ ಪಡೆದು ಹನುಮಧ್ವಜ ಹಾರಾಡಿಸಿದ್ದನ್ನು ಪೊಲೀಸರು ತೆರವುಗೊಳಿಸಿದಕ್ಕಾಗಿ ಬಿಜೆಪಿ ನಾಯಕರು ಸಿಎಂ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾರೆ. ಕರ್ನಾಟಕ ಬಿಜೆಪಿ‌ ಅಧ್ಯಕ್ಷ ವಿಜಯೇಂದ್ರ ಈ ಸಂಬಂಧ ಸಿಎಂ ಸಿದ್ದರಾಮಯ್ಯರನ್ನು ಹಿಂದೂ ವಿರೋಧಿ ಎಂದು ಕರೆದಿದ್ದಾರೆ. ಮನೆ ಮನೆಯಲ್ಲೂ ಹನುಮ ಧ್ವಜ ಹಾರಾಡಿಸಲು ಕರೆ ನೀಡಿದ್ದಾರೆ.

- Advertisement -

ಮುಖ್ಯಮಂತ್ರಿ ಸಿದ್ದರಾಮಯ್ಯನವರೇ , ನಿಮಗೆ ತಾನು ಹಿಂದೂ ಎಂದು ಕರೆದುಕೊಳ್ಳುವ ಯಾವ ನೈತಿಕತೆಯೂ ಉಳಿದಿಲ್ಲ. ನನ್ನ ಹೆಸರಿನಲ್ಲಿ ರಾಮ ಇದ್ದಾನೆ, ನಾನೂ ಹಿಂದು ಎಂದು ಹೇಳಿಕೊಳ್ಳುವ ಯಾವ ನೈತಿಕತೆಯೂ ಇಲ್ಲ ಎಂದು ಸಿಎಂ ಸಿದ್ದರಾಮಯ್ಯರ ವಿರುದ್ಧ ರಾಜ್ಯ ಬಿವೈ ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ.

ಎಕ್ಸ್ ನಲ್ಲಿ ತಮ್ಮ ಮಾತಿನ ವೀಡಿಯೋ ಪೋಸ್ಟ್ ಮಾಡಿರುವ ವಿಜಯೇಂದ್ರ, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಹಿಂದುವಿರೋಧಿ ನೀತಿಗಳನ್ನು ಅನುಸರಿಸುತ್ತಾ ಓಲೈಕೆ ರಾಜಕಾರಣ ಮಾಡುತ್ತಿದೆ ಎನ್ನುತ್ತಾ, ಒಂದು ಹನುಮಧ್ವಜ ತೆಗೆದರೆ ಹಿಂದುಗಳು ಮನೆಮನೆಯಲ್ಲೂ ಹನುಮಧ್ವಜ ಹಾರಿಸುವಂತೆ ಕರೆ ನೀಡಿದ್ದಾರೆ.



Join Whatsapp