ಬಿಜೆಪಿ ಪ್ರಣಾಳಿಕೆಯಲ್ಲಿ ಪಂಚರತ್ನ ಯೋಜನೆಯ ವಿಷಯಗಳನ್ನು ನಕಲು ಮಾಡಿದ್ದಾರೆ: ಕುಮಾರಸ್ವಾಮಿ

Prasthutha|

ರಾಯಚೂರು: ಬಿಜೆಪಿಯವರು ಬಿಡುಗಡೆ ಮಾಡಿರುವ ಪ್ರಣಾಳಿಕೆಯಲ್ಲಿ ಪಂಚರತ್ನ ವಿಷಯಗಳನ್ನು ನಕಲು ಮಾಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ.

- Advertisement -


ಈ ಬಗ್ಗೆ ರಾಯಚೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಸ್ರೇಲ್ ಮಾದರಿಯ ನೀರಾವರಿ ಯೋಜನೆ ಸಮ್ಮಿಶ್ರ ಸರ್ಕಾರದ ಯೋಜನೆ. ಈಗ ಅದನ್ನು ಬಿಜೆಪಿಯವರು ನಕಲು ಮಾಡಿದ್ದಾರೆ. ಮೂರು ಸಿಲಿಂಡರ್ ಕೊಡುತ್ತೇವೆ ಎನ್ನುತ್ತಾರೆ. ಅದರಿಂದ ಏನು ಉಪಯೋಗ? ಬಿಜೆಪಿಯವರು ಸಿಲಿಂಡರ್ ರೇಟ್ ನೆನಪಿಸಲು ಕೊಡುತ್ತಾರಾ? ಸರ್ಕಾರ ಇದ್ದಾಗಲೇ ಸಿಲಿಂಡರ್ ಕೊಡಬಹುದಿತ್ತು. ದಸರಾ ದೀಪಾವಳಿ ಗಣೇಶ ಹಬ್ಬಕ್ಕೊಂದು ಸಿಲಿಂಡರ್ ಕೊಡುತ್ತಾರಾ ಎಂದು ಪ್ರಶ್ನಿಸಿದರು.