ಬೆಂಗಳೂರು: ಶಿವಮೊಗ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದ ವಿಚಾರಕ್ಕೆ ಸಂಬಂಧಿಸಿದಂತೆ ಗಲಾಟೆ ಸ್ಥಳಕ್ಕೆ ಬಿಜೆಪಿ ಸತ್ಯಶೋಧನಾ ತಂಡ ತೆರಳಿದೆ. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ಕರ್ನಾಟಕ ರಾಜ್ಯ ಕಾಂಗ್ರೆಸ್, ಬಿಜೆಪಿ ಶಿವಮೊಗ್ಗದಲ್ಲಿ ಮತ್ತೊಮ್ಮೆ ಬೆಂಕಿ ಕಡ್ಡಿ ಗೀರಲು ಹೋಗಿದೆ ಎಂದು ಆರೋಪಿಸಿದೆ.
ಬಿಜೆಪಿ ವಿರುದ್ಧ ಟ್ವೀಟ್ ಮಾಡಿರುವ ಕರ್ನಾಟಕ ಕಾಂಗ್ರೆಸ್, ಶಾಂತ ಸ್ಥಿತಿಗೆ ಬಂದಿರುವ ಶಿವಮೊಗ್ಗಕ್ಕೆ ಬಿಜೆಪಿ ನಾಯಕರು ಹೋಗಿರುವುದು ಸತ್ಯ ಶೋಧನೆಗಲ್ಲ ಮತ್ತೊಮ್ಮೆ ಬೆಂಕಿ ಕಡ್ಡಿ ಗೀರಲು ಎಂದು ಹೇಳಿದೆ.
ಸತ್ಯ ಶೋಧನೆ ಮಾಡುವುದಕ್ಕೆ ಪೊಲೀಸರಿದ್ದಾರೆ, ಕಾನೂನು ಇದೆ. ಬಿಜೆಪಿ ನಾಯಕರ ಅಗತ್ಯವಿಲ್ಲ, ಬಿಜೆಪಿ ಯಾವುದೇ ಯಾವ ತನಿಖಾ ಏಜೆನ್ಸಿಯೂ ಅಲ್ಲ. ಪರಿಸ್ಥಿತಿಯನ್ನು ಹದಗೆಡಿಸಲು ಹೊಂಚು ಹಾಕಿರುವ ಬಿಜೆಪಿಗರ ಸಂಚನ್ನು ಯಶಸ್ವಿಯಾಗಲು ನಮ್ಮ ಸರ್ಕಾರ ಬಿಡುವುದಿಲ್ಲ ಎಂದು ಕಾಂಗ್ರೆಸ್ ಗುಡುಗಿದೆ.
ಶಾಂತ ಸ್ಥಿತಿಗೆ ಬಂದಿರುವ ಶಿವಮೊಗ್ಗಕ್ಕೆ ಬಿಜೆಪಿ ನಾಯಕರು ಹೋಗಿರುವುದು ಸತ್ಯ ಶೋಧನೆಗಲ್ಲ ಮತ್ತೊಮ್ಮೆ ಬೆಂಕಿ ಕಡ್ಡಿ ಗೀರಲು.
— Karnataka Congress (@INCKarnataka) October 5, 2023
ಸತ್ಯ ಶೋಧನೆ ಮಾಡುವುದಕ್ಕೆ ಪೊಲೀಸರಿದ್ದಾರೆ, ಕಾನೂನಿದೆ, ಬಿಜೆಪಿಯವರ ಅಗತ್ಯವಿಲ್ಲ, ಬಿಜೆಪಿ ಯಾವುದೇ ಯಾವ ತನಿಖಾ ಏಜೆನ್ಸಿಯೂ ಅಲ್ಲ.
ಪರಿಸ್ಥಿತಿಯನ್ನು ಹದಗೆಡಿಸಲು ಹೊಂಚು ಹಾಕಿರುವ ಬಿಜೆಪಿಗರ ಸಂಚನ್ನು…