ಮೈಸೂರು ಸ್ಯಾಂಡಲ್ ನಕಲಿ ಸೋಪ್ ತಯಾರಿಕರ ಜತೆ ಬಿಜೆಪಿ ನಂಟು: ಸಚಿವ ಪ್ರಿಯಾಂಕ್ ಖರ್ಗೆ

Prasthutha|

ಬೆಂಗಳೂರು: ಹೈದರಾಬಾದ್ ನಲ್ಲಿ ಮೈಸೂರು ಸ್ಯಾಂಡಲ್ ನಕಲಿ ಸೋಪ್ ತಯಾರಿಕೆ ಘಟಕ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದ್ದಂತೆ ಇಬ್ಬರ ವಿರುದ್ಧ ಎಫ್ ಐಆರ್ ದಾಖಲಾಗಿದೆ. ಕಾರ್ಖಾನೆ ನಡೆಸುತ್ತಿದ್ದ ರಾಕೇಶ್ ಜೈನ್, ಮಹಾವೀರ್ ಜೈನ್ ಎಂಬುವವರ ಮೇಲೆ ಎಫ್ ಐಆರ್ ದಾಖಲಾಗಿದೆ. ಆರೋಪಿಗಳು ಬಿಜೆಪಿಯ ಸಕ್ರಿಯ ನಾಯಕರು, ಕಾರ್ಯಕರ್ತರು ಎಂದು ಸಚಿವ ಪ್ರಿಯಾಂಕ್ ಖರ್ಗೆ ಆರೋಪ ಮಾಡಿದ್ದಾರೆ.

- Advertisement -


ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸಚಿವ ಎಂಬಿ ಪಾಟೀಲ್ ಅವರಿಗೆ ಅನಾಮಿಕನೊಬ್ಬ ಕರೆ ಮಾಡುತ್ತಾನೆ. ಮೈಸೂರು ಸ್ಯಾಂಡಲ್ ನಕಲಿ ಸೋಪ್ ಮಾರಾಟದ ಬಗ್ಗೆ ಮಾಹಿತಿ ನೀಡುತ್ತಾನೆ. ಎಂ.ಬಿ ಪಾಟೀಲ್ ಅವರು ಇಲ್ಲಿನ ಮೈಸೂರು ಸ್ಯಾಂಡಲ್ ಸೋಪ್ ತಯಾರಿಕಾ ಘಟದ ವ್ಯವಸ್ಥಾಪಕ ನಿರ್ದೇಶಕರಿಗೆ ಮಾಹಿತಿ ನೀಡುತ್ತಾರೆ. ನಂತರ ನಮ್ಮ ಅಧಿಕಾರಿಗಳು ನಕಲಿ ಸೋಪ್ ತಯಾರಿಕೆ ಮತ್ತು ಮಾರಾಟ ಜಾಲ ಪತ್ತೆ ಹಚ್ಚಲು ಮುಂದಾದರು ಎಂದು ತಿಳಿಸಿದರು.


ಬಳಿಕ ನಮ್ಮ ಅಧಿಕಾರಿಗಳು ಹೈದರಾಬಾದ್ಗೆ ತೆರಳಿ 25 ಲಕ್ಷ ರೂ. ಆರ್ಡರ್ ಇದೆ ಅಂತ ಹೇಳುತ್ತಾರೆ. ಬಹಳ ದೊಡ್ಡ ಆರ್ಡರ್ ಇರುವುದರಿಂದ ಕಾರ್ಖಾನೆಗೆ ಬರುತ್ತೇವೆ ಎಂದು ನಮ್ಮ ಅಧಿಕಾರಿಗಳು ಹೇಳುತ್ತಾರೆ. ಬಹಳ ಸೂಕ್ಷ್ಮವಾಗಿ ಈ ಕಾರ್ಯಾಚರಣೆ ನಡೆಯುತ್ತದೆ. ನಕಲಿ ಎಂದು ಖಚಿತವಾದ ಮೇಲೆ, ನಮ್ಮ ಅಧಿಕಾರಿಗಳು ಕಾರ್ಖಾನೆ ಮೇಲೆ ದಾಳಿ ಮಾಡಿದ್ದಾರೆ. ಈ ವೇಳೆ ನಕಲಿ ಸೋಪ್ ಮತ್ತು ಕವರ್ಗಳು ಪತ್ತೆಯಾಗಿವೆ ಎಂದರು.



Join Whatsapp