Home ಟಾಪ್ ಸುದ್ದಿಗಳು ಬಿಜೆಪಿ ಬಣ ಜಗಳ : ಎಲ್ಲ ಶಾಸಕರ ಜೊತೆ ಮಾತುಕತೆ ನಡೆಸಿದ ರಾಜ್ಯ ಉಸ್ತುವಾರಿ ರಾಧಾಮೋಹನ್​

ಬಿಜೆಪಿ ಬಣ ಜಗಳ : ಎಲ್ಲ ಶಾಸಕರ ಜೊತೆ ಮಾತುಕತೆ ನಡೆಸಿದ ರಾಜ್ಯ ಉಸ್ತುವಾರಿ ರಾಧಾಮೋಹನ್​

ಬೆಂಗಳೂರು : ರಾಜ್ಯ ಬಿಜೆಪಿಯಲ್ಲಿನ ಬಣ ಬಡಿದಾಟಕ್ಕೆ ಅಂತ್ಯ ಹಾಡಲು ಮುಂದಾಗಿರುವ ಹೈಕಮಾಂಡ್, ಬಿಜೆಪಿಯ ಎಲ್ಲಾ ನಾಯಕರನ್ನು ಮತ್ತೆ ಒಗ್ಗೂಡಿಸುವ ಪ್ರಯತ್ನ ನಡೆಸಿದೆ. ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಶಾಸಕರ ಜೊತೆ ರಾಜ್ಯ ಉಸ್ತುವಾರಿ ರಾಧಾಮೋಹನ್​​ ದಾಸ್​ ಅಗರವಾಲ್ ಅವರು ಮಾತುಕತೆ ನಡೆಸಿದರು.

ಪ್ರತಿ ಶಾಸಕರ ಜೊತೆ ರಾಧಾಮೋಹನ್​​​ ದಾಸ್​ ಪ್ರತ್ಯೇಕ ಚರ್ಚೆ ನಡೆಸಿದ್ದು, ಯಾವುದೇ ಬಣದಲ್ಲಿ ಗುರುತಿಸಿಕೊಳ್ಳದೆ ತಟಸ್ಥ ನಿಲುವು ಹೊಂದಿರುವ ಶಾಸಕರು ಅಗರವಾಲ್ ಅವರನ್ನು ಭೇಟಿ ಮಾಡಿದರು. ಪಕ್ಷದ ಈಗಿನ ಸ್ಥಿತಿ ಉತ್ತಮವಾಗಿಲ್ಲ. ದಯವಿಟ್ಟು ಇದನ್ನು ಮೊದಲು ಸರಿಪಡಿಸಬೇಕಿದೆ ಎಂದು ಮನವಿ ಮಾಡಿದ್ದಾರೆ.

ಸದ್ಯ ಪಕ್ಷದ ರಾಜ್ಯಾಧ್ಯಕ್ಷರಾಗಿರುವ ಬಿ. ವೈ. ವಿಜಯೇಂದ್ರ ಪ್ರೊಬೆಷನರಿ ಪೀರಿಯಡ್​ನಲ್ಲಿದ್ದಾರೆ. ಅವರಿಗೂ ಸ್ವಲ್ಪ ಅವಕಾಶ ಕೊಡಬೇಕೆಂಬುದು ಬಹುತೇಕ ಮುಖಂಡರ ಅಭಿಪ್ರಾಯ. ಪಕ್ಷಕ್ಕೆ ಶಕ್ತಿ ಇದ್ದರೆ ಈಗಿನ ಪರಿಸ್ಥಿತಿಯನ್ನು ಸರಿಪಡಿಸಿ ಎಂದು ರಾಧಾ ಮೋಹನ್​ ದಾಸ್​ ಅಗರವಾಲ್ ಅವರಿಗೆ ಬಿಜೆಪಿ ಶಾಸಕರು ಮನವಿ ಮಾಡಿದ್ದಾರೆ ಎಂದು ವರದಿಯಾಗಿದೆ.

Join Whatsapp
Exit mobile version