ನವದೆಹಲಿ: ಪಂಚರಾಜ್ಯಗಳ ಪೈಕಿ ನಾಲ್ಕು ರಾಜ್ಯಗಳಾದ ಛತ್ತೀಸ್‌ಗಢ, ತೆಲಂಗಾಣ, ಮಧ್ಯಪ್ರದೇಶ, ರಾಜಸ್ಥಾನ ನಾಲ್ಕು ರಾಜ್ಯಗಳಲ್ಲಿ ಮತ ಎಣಿಕೆ ಕಾರ್ಯ ಆರಂಭವಾಗಿದ್ದು, ಎಲ್ಲರ ಕುತೂಹಲ ಕೆರಳಿ ನಿಂತಿದೆ. ಎಲ್ಲರ ಚಿತ್ತ ಮತ ಎಣಿಕೆ ಕೇಂದ್ರದತ್ತ ಕೇಂದ್ರೀಕೃತವಾಗಿದೆ. ನಾಲ್ಕು ರಾಜ್ಯಗಳ ಪೈಕಿ ಮಧ್ಯಪ್ರದೇಶ, ರಾಜಸ್ಥಾನದಲ್ಲಿ ಬಿಜೆಪಿ ಮುನ್ನಡೆಯಲ್ಲಿದೆ.
ನಾಲ್ಕು ರಾಜ್ಯಗಳ 638 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ 7,643 ಅಭ್ಯರ್ಥಿಗಳು ಸ್ಪರ್ಧಿಸಿದ್ದಾರೆ.
ಮಧ್ಯಪ್ರದೇಶದಲ್ಲಿ ಬಿಜೆಪಿ 152 ಕ್ಷೇತ್ರಗಳಲ್ಲಿ ಹಾಗೂ ಕಾಂಗ್ರೆಸ್ 76 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಛತ್ತೀಸ್‌ಗಢದಲ್ಲಿ ಕಾಂಗ್ರೆಸ್ 47 ಮತ್ತು ಬಿಜೆಪಿ 42 ಕ್ಷೇತ್ರಗಳಲ್ಲಿ ಆರಂಭಿಕ ಮುನ್ನಡೆಯನ್ನು ಸಾಧಿಸಿದೆ. ಛತ್ತೀಸ್‌ಗಢದಲ್ಲಿ ಮತಗಟ್ಟೆ ಸಮೀಕ್ಷೆಯ ರೀತಿಯಲ್ಲೇ ಕಾಂಗ್ರೆಸ್ ಮುನ್ನಡೆ ಸಾಧಿಸುತ್ತಿದ್ದು, ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ಬರುವ ಸಾಧ್ಯತೆಗಳಿವೆ.
ರಾಜಸ್ಥಾನದಲ್ಲಿ 105 ಕ್ಷೇತ್ರಗಳಲ್ಲಿ ಬಿಜೆಪಿ 78 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮುನ್ನಡೆಯನ್ನು ಸಾಧಿಸಿಕೊಂಡಿದೆ. ರಾಜಸ್ಥಾನದ ಮತದಾರರು ಪ್ರತಿ ಐದು ವರ್ಷಕ್ಕೊಮ್ಮೆ ಸರ್ಕಾರ ಬದಲಿಸುವ ಸಂಪ್ರದಾಯವನ್ನು 25 ವರ್ಷಗಳಿಂದ ಅನುಸರಿಸಿಕೊಂಡು ಬಂದಿದ್ದಾರೆ. ಈ ಸಂಪ್ರದಾಯ ಈ ಸಲ ಮುರಿಯಲಿದೆಯೇ ಎಂಬುದು ಕುತೂಹಲಕ್ಕೆ ಕಾರಣವಾಗಿದೆ.
ತೆಲಂಗಾಣದಲ್ಲಿ ಕಾಂಗ್ರೆಸ್ 69 ಕ್ಷೇತ್ರಗಳಲ್ಲಿ ಹಾಗೂ ಕಾಂಗ್ರೆಸ್ 39 ಕ್ಷೇತ್ರಗಳಲ್ಲಿ ಮುನ್ನಡೆಯನ್ನು ಸಾಧಿಸಿದೆ. ತೆಲಂಗಾಣ ವಿಧಾನಸಭೆಯ 119 ಸ್ಥಾನಗಳಿಗೆ ನಡೆದ ಚುನಾವಣೆಯ ಮತ ಎಣಿಕೆ ಕಾರ್ಯ ಪ್ರಗತಿಯಲ್ಲಿದ್ದು, ಕಾಂಗ್ರೆಸ್ ಪಕ್ಷ ಅರ್ಧಕ್ಕೂ ಹೆಚ್ಚು ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಈ ಮೂಲಕ ಆಡಳಿತರೂಢ ಭಾರತ ರಾಷ್ಟ್ರೀಯ ಸಮಿತಿ(BRS)ಗೆ ತೀವ್ರ ಹಿನ್ನಡೆಯಾಗುವ ಲಕ್ಷಣಗಳು ಕಾಣಿಸುತ್ತಿವೆ