Home ಟಾಪ್ ಸುದ್ದಿಗಳು ಕೊಳಕು, ವಿಕೃತಿಗಳ ಮಹಾಸಂಗಮವೇ ಬಿಜೆಪಿ: ಜೆಡಿಎಸ್

ಕೊಳಕು, ವಿಕೃತಿಗಳ ಮಹಾಸಂಗಮವೇ ಬಿಜೆಪಿ: ಜೆಡಿಎಸ್

►ನರಹಂತಕ ಮನಃಸ್ಥಿತಿಯೇ ಬಿಜೆಪಿಯ ನೈಜಮುಖ

ಬೆಂಗಳೂರು: ನಾಡಪ್ರಭು ಕೆಂಪೇಗೌಡ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಅವರನ್ನು ಆಹ್ವಾನಿಸದ ರಾಜ್ಯ ಬಿಜೆಪಿ ಸರಕಾರದ ದಾರ್ಷ್ಟ್ಯತನದ ವಿರುದ್ಧ ಜೆಡಿಎಸ್ ತೀವ್ರ ವಾಗ್ದಾಳಿ ನಡೆಸಿದೆ.

ಈ ಬಗ್ಗೆ ಟ್ವೀಟ್ ಮಾಡಿರುವ ಜೆಡಿಎಸ್, ನಾಡಪ್ರಭುಗಳ ಪ್ರತಿಮೆ ಅನಾವರಣಕ್ಕೆ ಮಾಜಿ ಪ್ರಧಾನಿಗಳಾದ ಶ್ರೀ ಹೆಚ್ ಡಿ ದೇವೇಗೌಡ ಅವರನ್ನು ಆಹ್ವಾನಿಸದೆ ರಾಜ್ಯ ಬಿಜೆಪಿ ಸರಕಾರ ಶಿಷ್ಟಾಚಾರ ಲೋಪ ಎಸಗಿದ ಬಗ್ಗೆ ಮುಖ್ಯಮಂತ್ರಿಗಳು ಹಾಗೂ ಸರಕಾರದ ಮುಖ್ಯ ಕಾರ್ಯದರ್ಶಿ ಉತ್ತರ ನೀಡಬೇಕೇ ಹೊರತು ಬಿಜೆಪಿ ಅಲ್ಲ. ಇಷ್ಟಕ್ಕೂ ಅದು ಕೇಶವಕೃಪದ ಕಾರ್ಯಕ್ರಮವಲ್ಲ ಎಂದು ಆಕ್ರೋಶವ್ಯಕ್ತಪಡಿಸಿದೆ.

ಬೂಟಾಟಿಕೆ ದಾಸಯ್ಯನಿಗೆ ಮೈಯಲ್ಲಾ ಪಂಗನಾಮʼ ಎನ್ನುವಂತಿದೆ ಬಿಜೆಪಿ ಪರಿಸ್ಥಿತಿ. ಕೊಳಕು, ವಿಕೃತಿಗಳ ಮಹಾಸಂಗಮವೇ ಬಿಜೆಪಿ. ರಕ್ತಪೀಪಾಸುತನ, ನರಹಂತಕ ಮನಃಸ್ಥಿತಿಯೇ ಬಿಜೆಪಿಯ ನೈಜಮುಖ. ಆಪರೇಷನ್‌ ಕಮಲವೇ ಅದರ ಶಿಷ್ಟಾಚಾರ, ಸುಳ್ಳಿನ ಪ್ರಚಾರವೇ ಅದರ ಸಂಸ್ಕಾರ ಎಂದು ಟೀಕಿಸಿದೆ.

ಶ್ರೀ ಹೆಚ್.ಡಿ.ದೇವೇಗೌಡರನ್ನು ಜೆಡಿಎಸ್ ಎಂದಿಗೂ ಜಾತಿ ರಾಜಕಾರಣಕ್ಕೆ ಬಳಸಿಕೊಂಡಿಲ್ಲ. ಆದರೆ, ಶ್ರೀ ನರೇಂದ್ರ ಮೋದಿ
ಅವರ ಅರ್ಧದಿನದ ʼಕರ್ನಾಟಕದ ಕಾಟಾಚಾರದ ಭೇಟಿʼ ಏನನ್ನು ಗುರಿ ಮಾಡಿಕೊಂಡಿತ್ತು ಎನ್ನುವುದನ್ನು ಮಾಧ್ಯಮಗಳೇ ನಿರಂತರವಾಗಿ ವರದಿ ಮಾಡುತ್ತಿರುವುದು ಕಾಣುತ್ತಿಲ್ಲವೇ? ಕಮಲದ ಕಣ್ಣಿಗೆ ಕಾಮಾಲೆ ಎನ್ನುವುದು ಖರೆ ಎಂದು ಲೇವಡಿ ಮಾಡಿದೆ.

Join Whatsapp
Exit mobile version