ಭಯ ಹುಟ್ಟಿಸುವ ಮೂಲಕ ಅಭಿವ್ಯಕ್ತಿ ಸ್ವಾತಂತ್ರ್ಯ ಹರಣ ಮಾಡುತ್ತಿರುವ ಬಿಜೆಪಿ: ಸಿದ್ದರಾಮಯ್ಯ

Prasthutha|

ಮೈಸೂರು: ಪ್ರಜಾಪ್ರಭುತ್ವದಲ್ಲಿ ಯಾರು ಎಲ್ಲಿ ಬೇಕಾದರೂ ಸ್ಪರ್ಧಿಸುವ ಅವಕಾಶ ಇದೆ. ಜನ ಬಯಸಿದ ಕಡೆ ಸ್ಪರ್ಧೆ ಮಾಡುತ್ತೇನೆ. ಕೋಲಾರದವರು ಬಯಸಿದರೆ ಕೋಲಾರ, ವರುಣದವರು ಬಯಸಿದರೆ ವರುಣದಲ್ಲಿ ಸ್ಪರ್ಧಿಸುತ್ತೇನೆ ಎಲ್ಲಿ ಬೇಕಾದರೂ ನಿಲ್ಲುವವನು ನಾಯಕ ಎಂದು ತಮ್ಮ ಸ್ಪರ್ಧೆ ಬಗ್ಗೆ ಟೀಕಿಸುತ್ತಿರುವ ಬಿಜೆಪಿ ನಾಯಕರಿಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಟಾಂಗ್ ನೀಡಿದ್ದಾರೆ.

- Advertisement -


ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ ರಾಜಕೀಯಕ್ಕೆ ಬಂದಿದ್ದು 1996 ರಲ್ಲಿ. ಅಷ್ಟೊತ್ತಿಗೆ ನಾನು 8 ಚುನಾವಣೆ ಗೆದ್ದಿರಲಿಲ್ವಾ..? ನಾನು ಹೋಗದ ಕಾರಣ ಸಿದ್ದರಾಮಯ್ಯ ಗೆದ್ದರು ಎಂಬ ಕುಮಾರಸ್ವಾಮಿಯ ಮಾತುಗಳಲ್ಲಿ ಅರ್ಥ ಇಲ್ಲ. ಇದು ಮತ ಹಾಕಿದ ಮತದಾರರಿಗೆ ಮಾಡಿದ ಅವಮಾನ ಎಂದು ಆಕ್ರೋಶ ವ್ಯಕ್ತಪಡಿಸಿದರು.


ಸಾಹಿತಿಗಳು, ಚಿಂತಕರು, ಪತ್ರಕರ್ತರು, ಪ್ರತಿಪಕ್ಷದವರಿಗೆ ಬೆದರಿಕೆ ಹಾಕುವುದು ಒಳ್ಳೆಯ ಬೆಳವಣಿಗೆ ಅಲ್ಲ. ಇದು ಪ್ರಜಾಪ್ರಭುತ್ವಕ್ಕೆ ಮಾರಕ. ಬಿಜೆಪಿಯವರು ಮೊದಲಿನಿಂದಲೂ ಇಂಥವುಗಳನ್ನು ಪೋಷಿಸಿಕೊಂಡು ಬರುತ್ತಿದ್ದಾರೆ. ಕೇಂದ್ರ ಸರ್ಕಾರವೇ ಇದರ ಪರವಾಗಿ ಇದೆ. ಬಸವರಾಜ ಬೊಮ್ಮಾಯಿ, ಆರಗ ಜ್ಞಾನೇಂದ್ರ ಇವರೆಲ್ಲ ಇದರ ಭಾಗ. ಸಂವಿಧಾನ ಎಲ್ಲರಿಗೂ ಅಭಿವ್ಯಕ್ತಿ ಸ್ವಾತಂತ್ರ್ಯ ನೀಡಿದೆ. ಭಯ ಹುಟ್ಟಿಸುವ ಮೂಲಕ ಬಿಜೆಪಿಯವರು ಅಭಿವ್ಯಕ್ತಿ ಸ್ವಾತಂತ್ರ್ಯ ಹರಣ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

Join Whatsapp