ಬೆಂಗಳೂರು: ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಅವರು ಇಂದು ಬಿಜೆಪಿ ಸೇರ್ಪಡೆಯಾದರು.
ಬಿಜೆಪಿ ಸೇರ್ಪಡೆ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಜನಾರ್ದನ ರೆಡ್ಡಿ, ನನ್ನ ರಕ್ತದ ಕಣ ಕಣದಲ್ಲಿ ಬಿಜೆಪಿ ಇದೆ ಎಂದರು. ಬಿಜೆಪಿ ಪಕ್ಷದ ಜೊತೆ ಕೆಆರ್ ಪಿಪಿ ಪಕ್ಷವನ್ನು ವಿಲೀನ ಮಾಡುತ್ತಿದ್ದೇನೆ. ಬಿಎಸ್ ಯಡಿಯೂರಪ್ಪ ಆಶೀರ್ವಾದ, ಬಿವೈ ವಿಜಯೇಂದ್ರ ಅವರ ನೇತೃತ್ವದಲ್ಲಿ ಪಕ್ಷಕ್ಕೆ ಸೇರಿದ್ದೇನೆ. ಕೇಂದ್ರ ಸಚಿವ ಅಮಿತ್ ಶಾ ಅವರು ನನಗೆ ಪಕ್ಷಕ್ಕೆ ಬನ್ನಿ ಅಂದರು. ಕರ್ನಾಟಕದಲ್ಲಿ ಬಿಜೆಪಿ ನೆಲೆಯೂರಲು ಬಿಎಸ್ ಯಡಿಯೂರಪ್ಪ ಕಾರಣ. ಅವರು ಮುಖ್ಯಮಂತ್ರಿಯಾಗಿದ್ದಾಗ, ನನಗೆ ಸಚಿವ ಸ್ಥಾನ ಕೊಟ್ಟಿದ್ದರು.
ಈಗ ಅವರ ಸುಪುತ್ರ ಇದ್ದಾರೆ. ತಂದೆ ಮಗನ ಜೊತೆ ಈಗ ಕೆಲಸ ಮಾಡುವ ಅವಕಾಶ ಸಿಕ್ಕಿದೆ. ನಾನು ಯಾವ ಷರತ್ತು ಇಲ್ಲದೆ ಕಾರ್ಯಕರ್ತನಾಗಿ ಬಿಜೆಪಿಗೆ ಸೇರಿದ್ದೇನೆ. ಯಾವುದೇ ಹುದ್ದೆಯ ಆಕಾಂಕ್ಷೆ ನನಗೆ ಇಲ್ಲ ಎಂದು ತಿಳಿಸಿದರು.