ಹುಬ್ಬಳ್ಳಿ: ಈಗ ಚುನಾವಣೆ ಮಾಡಿದರೆ ಬಿಜೆಪಿಗೆ 40 ಸೀಟು ಸಹ ಬರಲ್ಲ. ಏಕೆಂದರೆ ಬಿಜೆಪಿ ರಿಪೇರಿ ಮಾಡಲಾಗದಷ್ಟು ಹದಗೆಟ್ಟಿದೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಈ ಬಗ್ಗೆ ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, 2018ರ ಚುನಾವಣೆಯಲ್ಲೇ ಮೋದಿ ಮತ್ತು ಯಡಿಯೂರಪ್ಪ ನೇತೃತ್ವದಲ್ಲಿ ಬಿಜೆಪಿ ವಿಧಾನಸಭಾ ಚುನಾವಣಾ ಎದುರಿಸಿತ್ತು. ಅಷ್ಟೆಲ್ಲಾ ಗುದ್ದಾಡಿದ್ರೂ ಕೊನೆಗೆ ಬಂದು ನಿಂತಿದ್ದು 104ಕ್ಕೆ. ಇವತ್ತು ಬಿಜೆಪಿ ಹದಗೆಟ್ಟು ಹೋಗಿದೆ, ಈಗ ಚುನಾವಣಾ ನಡೆದ್ರೆ 66 ಅಲ್ಲಾ 40 ಸೀಟ್ ಸಹ ಬಿಜೆಗೆ ಬರಲ್ಲ. ಬಿಜೆಪಿ ರಿಪೇರಿ ಮಾಡಲಾಗದಷ್ಟು ಹದಗೆಟ್ಟಿದೆ, ವಿಜಯೇಂದ್ರ ಅಲ್ಲಾ ಯಾರೂ ಅಧ್ಯಕ್ಷರಾದರೂ ಅದನ್ನು ಸರಿ ಮಾಡಲು ಆಗುವುದಿಲ್ಲ ಎಂದು ಹೇಳಿದ್ದಾರೆ.