ರಾಂಚಿ: ಸಂಸದ ಜಯಂತ್ ಸಿನ್ಹಾಗೆ ಬಿಜೆಪಿ ಶೋಕಾಸ್ ನೋಟಿಸ್ ಜಾರಿ ಮಾಡಿದೆ.
ಜಾರ್ಖಂಡ್ ನ ಹಜಾರಿಬಾಗ್ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಮನೀಶ್ ಜೈಸ್ವಾಲ್ ಅವರನ್ನು ಪಕ್ಷ ಘೋಷಣೆ ಮಾಡಿತ್ತು. ಈ ಮೂಲಕ ಲೋಕಸಭಾ ಚುನಾವಣೆಗೆ ಸಿನ್ಹಾ ಅವರಿಗೆ ಟಿಕೆಟ್ ನೀಡಲು ನಿರಾಕರಿಸಿತು. ಅಂದಿನಿಂದ ಜಯಂತ್ ಸಿನ್ಹಾ ಅವರು ಸಂಘಟನಾ ಕಾರ್ಯ ಮತ್ತು ಪ್ರಚಾರದಲ್ಲಿ ಆಸಕ್ತಿ ತೋರುತ್ತಿರಲಿಲ್ಲ. ಅಲ್ಲದೇ ಪಕ್ಷದ ಅಧಿಕೃತ ಅಭ್ಯರ್ಥಿ ಪರ ಕೆಲಸ ಮಾಡದ ಆರೋಪ ಹಾಗೂ ಈ ಬಾರಿ ಮತದಾನವನ್ನು ಕೂಡ ಮಾಡಿಲ್ಲ ಎಂಬ ಆರೋಪ ಕೇಳಿಬಂದಿತ್ತು.
ಸಿನ್ಹಾ ನಡೆ ಪಕ್ಷದ ಹೈಕಮಾಂಡ್ ಗಮನಕ್ಕೆ ಬಂದಿದ್ದು, ಇದೀಗ ಶೋಕಾಸ್ ನೋಟಿಸ್ ಜಾರಿ ಮಾಡಿದೆ.