ಬೆಂಗಳೂರು: ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ ಯಶವಂತಪುರದ ಶಾಸಕ ಎಸ್.ಟಿ. ಸೋಮಶೇಖರ್ ಹಾಗೂ ಮತದಾನದಿಂದ ದೂರ ಉಳಿದ ಯಲ್ಲಾಪುರ ಶಾಸಕ ಶಿವರಾಮ ಹೆಬ್ಬಾರ್ ಅವರಿಗೆ ಬಿಜೆಪಿ ಮುಖ್ಯ ಸಚೇತಕರು ಶೋಕಾಸ್ ನೋಟಿಸ್ ನೀಡಿದ್ದಾರೆ.
ಫೆಬ್ರವರಿ 27 ರಂದು ನಡೆದ ಚುನಾವಣೆಯಲ್ಲಿ ಎಸ್ ಟಿ ಸೋಮಶೇಖರ್ ಬಿಜೆಪಿ ಪಕ್ಷದ ವಿಪ್ ಉಲ್ಲಂಘಿಸಿ ಕಾಂಗ್ರೆಸ್ ಅಭ್ಯರ್ಥಿ ಅಜಯ್ ಮಾಕೇನ್ ಗೆ ಅಡ್ಡ ಮತದಾನ ಮಾಡಿದ ನಂತರ ಕಾಂಗ್ರೆಸ್ ಮೂರು ರಾಜ್ಯಸಭಾ ಸ್ಥಾನಗಳನ್ನು ಗೆದ್ದುಕೊಂಡರೆ, ಬಿಜೆಪಿ ಕೇವಲ ಒಂದು ಸ್ಥಾನ ಗಳಿಸಿತ್ತು.
ಕೆಲ ತಿಂಗಳುಗಳಿಂದ ಪಕ್ಷದ ನಾಯಕತ್ವದೊಂದಿಗೆ ಅಸಮಾಧಾನ ಹೊಂದಿದ್ದ ಎಸ್. ಟಿ. ಸೋಮಶೇಖರ್ ಹಾಗೂ ಶಿವರಾಮ ಹೆಬ್ಬಾರ್, ಕಾಂಗ್ರೆಸ್ ನೊಂದಿಗೆ ನಿಕಟ ಸಂಪರ್ಕ ಹೊಂದಿದ್ದಾರೆ ಎಂದು ತಿಳಿದು ಬಂದಿದೆ.