ಬಿಜೆಪಿ-ಜೆಡಿಎಸ್ ಮೈತ್ರಿ: ದೇವೇಗೌಡರ ಸ್ಪರ್ಧೆಗೆ ವಿರೋಧ ವ್ಯಕ್ತಪಡಿಸಿದ ಬಿಜೆಪಿ ಸಂಸದ!

Prasthutha|

►‘ಗೌಡರಿಗೆ ವೋಟ್ ಹಾಕಿದರೆ ಜನತೆ ಪಾಪ ಮಾಡಿದಂತಾಗುತ್ತದೆ’

- Advertisement -

ತುಮಕೂರು: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಹೆಚ್.ಡಿ.ದೇವೇಗೌಡರು ತುಮಕೂರು ಕ್ಷೇತ್ರದಿಂದ ಸ್ಪರ್ಧಿಸಿದರೆ ಜಿಲ್ಲೆಯ ಜನರು ವೋಟು ಹಾಕುವುದಿಲ್ಲ ಎಂದು ಬಿಜೆಪಿ ಸಂಸದ ಜಿ.ಎಸ್.ಬಸವರಾಜು ಹೇಳಿದರು.

ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲೆಯಿಂದ ದೇವೇಗೌಡರ ಸ್ಪರ್ಧೆ ವಿಚಾರವಾಗಿ ವಿರೋಧ ವ್ಯಕ್ತಪಡಿಸಿದರು. ನಮ್ಮ ಪಕ್ಷದವರು ಮೈತ್ರಿ ಮಾಡಿಕೊಂಡು ಜಿಲ್ಲೆಯಿಂದ ದೇವೇಗೌಡರನ್ನು ನಿಲ್ಲಿಸಲು ಹೊರಟಿದ್ದಾರೆ. ಹೇಮಾವತಿ ನೀರಿನ ವಿಚಾರದಲ್ಲಿ ಜಿಲ್ಲೆಗೆ ಗೌಡರು ಕಂಡರಿಯದಷ್ಟು ಮೋಸ ಮಾಡಿದ್ದಾರೆ. ಯಾರಿಗಾದರೂ ವೋಟ್ ಹಾಕಲಿ. ಗೌಡರಿಗೆ ವೋಟ್ ಹಾಕಬಾರದು. ಅವರಿಗೆ ವೋಟ್ ಹಾಕಿದರೆ ಜಿಲ್ಲೆಯ ಜನತೆ ಪಾಪ ಮಾಡಿದಂತಾಗುತ್ತದೆ ಎಂದು ತಿಳಿಸಿದರು.

- Advertisement -

ಲೋಕಸಭೆಗೆ ಜೆಡಿಎಸ್‌ನವರು ಐದು ಕ್ಷೇತ್ರ ಕೇಳಿದ್ದು, ತುಮಕೂರನ್ನು ಬಿಟ್ಟುಕೊಡುವಂತೆ ಬೇಡಿಕೆ ಇಟ್ಟಿದ್ದಾರೆ. ರಕ್ತ ಕೊಟ್ಟರೂ ಜಿಲ್ಲೆಗೆ ಹೇಮಾವತಿ ನೀರು ಕೊಡಲ್ಲ ಎಂದು ಹೇಳಿದ್ದ ದೇವೇಗೌಡರನ್ನು ಇಲ್ಲಿನ ಜನರು ಒಮ್ಮೆ ಸೋಲಿಸಿದ್ದಾರೆ. ಅವರ ಸಂಬಂಧಿಗಳೂ ವೋಟ್ ಹಾಕಲ್ಲ. ಒಕ್ಕಲಿಗ ಸಮುದಾಯದ ಒಬ್ಬರೂ ಮತ ಹಾಕಲ್ಲ ಎಂದರು.

Join Whatsapp