ಬಿಜೆಪಿ-ಜೆಡಿಎಸ್ ಮೈತ್ರಿ ವಿಚಾರ: ಕಾಂಗ್ರೆಸ್’ಗೆ ನಡುಕ ಶುರು; ಕುಮಾರಸ್ವಾಮಿ

Prasthutha|

ಬೆಂಗಳೂರು: ಲೋಕಸಭೆ ಚುನಾವಣೆಗೆ ಕರ್ನಾಟಕದಲ್ಲಿ ಬಿಜೆಪಿ ಮತ್ತು ಜೆಡಿಎಸ್ ನಡುವೆ ಮೈತ್ರಿ ಬಗ್ಗೆ ಮಾತನಾಡಿದ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ, ಪ್ರಸಕ್ತ ಬೆಳವಣಿಗೆ ಪ್ರಾಥಮಿಕ ಹಂತದಲ್ಲಿದೆ ಇದೆ ಅಷ್ಟೇ. ನಾಳೆ ಕಾರ್ಯಕರ್ತರ ಸಭೆ ಮಾಡಲು ದೇವೇಗೌಡರು ಹೇಳಿದ್ದರು. ಹೀಗಾಗಿ ಕಾರ್ಯಕರ್ತರ ಅಭಿಪ್ರಾಯ ಕೇಳಬೇಕು ಅಲ್ವಾ? ಎಂದು ಪ್ರಶ್ನಿಸಿದರು.

- Advertisement -

ಇಲ್ಲಿ ಕೊಟ್ಟು ತೆಗೆದುಕೊಳ್ಳುವುದು ಅಲ್ಲ, ವಿಶ್ವಾಸ, ಗೌರವ ಮುಖ್ಯ. ಗೌರವ, ವಿಶ್ವಾಸವನ್ನು ಮೊದಲು ಸರಿಪಡಿಸಿಕೊಳ್ಳಬೇಕು ಎಂದು ಹೇಳಿದ ಕುಮಾರಸ್ವಾಮಿ, ಮೈತ್ರಿ ವಿಚಾರವಾಗಿ ಉತ್ತರ ನೀಡುವ ಕಾಲ ಇನ್ನೂ ದೂರ ಇದೆ. ಯಾವುದೇ ರಾಜಕಾರಣಿಗೂ ಹತಾಶೆ ಎಂಬುದು ಬರಲ್ಲ. ಇಲ್ಲಿ ಹತಾಶೆ ಆಗುತ್ತಿರುವುದು, ನಡುಕ ಆಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಮಾತ್ರ ಎಂದರು.

Join Whatsapp