ಬಿಜೆಪಿ-ಜೆಡಿಎಸ್ ಮೈತ್ರಿಗೆ ಮುಸ್ಲಿಮರ ಮತ ಅಗತ್ಯವಿಲ್ಲ: ಬಸನಗೌಡ ಪಾಟೀಲ್ ಯತ್ನಾಳ್

Prasthutha|

ವಿಜಯಪುರ: ಬಿಜೆಪಿ-ಜೆಡಿಎಸ್ ಮೈತ್ರಿಗೆ ಮುಸಲ್ಮಾನರ ಮತ ಅಗತ್ಯವಿಲ್ಲ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.

- Advertisement -

ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಅವರು, ಬಿಜೆಪಿ-ಜೆಡಿಎಸ್ ಮೈತ್ರಿಗೆ ಮುಸಲ್ಮಾನರ ವೋಟು ಅಗತ್ಯವಿಲ್ಲ ಎಂದು ಹೇಳಿದರು. ಅವರು ಯಾವತ್ತೂ ಹೆಚ್ ಡಿ ಕುಮಾರಸ್ವಾಮಿಯವರ ಕೈಹಿಡಿದವರಲ್ಲ, ಅವರು ಮತ ಹಾಕಿದ್ದರೆ ಅದು ಹೆಚ್ ಡಿ ದೇವೇಗೌಡರಿಗೆ ಮಾತ್ರ ಎಂದು ಯತ್ನಾಳ್ ಹೇಳಿದರು.
ಒಂದು ವೇಳೆ ಮುಸಲ್ಮಾನರಿಗೆ ಕುಮಾರಸ್ವಾಮಿಯ ಮೇಲೆ ಪ್ರೀತಿ ಇದ್ದಿದ್ದರೆ, ವಿಧಾನ ಸಭಾ ಚುನಾವಣೆಯಲ್ಲಿ ರಾಮನಗರದಿಂದ ಸ್ಪರ್ಧಿಸಿದ್ದ ನಿಖಿಲ್ ಕುಮಾರಸ್ವಾಮಿ ಸೋಲುತ್ತಿರಲಿಲ್ಲ ಎಂದು ಯತ್ನಾಳ್ ಹೇಳಿದರು.


ಬಿಜೆಪಿ-ಜೆಡಿಎಸ್ ಮೈತ್ರಿಯನ್ನು ಸ್ವಾಗತಿಸಿದ ಅವರು ವಿಜಯದಶಮಿಯ ಬಳಿಕ ಒಂದು ಶುಭ ಘಳಿಗೆಯಲ್ಲಿ ಲೋಕಸಭಾ ಚುನಾವಣೆಗಾಗಿ ಎರಡು ಪಕ್ಷಗಳ ನಾಯಕರ ನಡುವೆ ಸೀಟು ಹೊಂದಾಣಿಕೆಗೆ ಸಂಬಂಧಿಸಿದಂತೆ ಮಾತುಕತೆ ನಡೆಯಲಿದೆ ಎಂದು ಹೇಳಿದರು.

Join Whatsapp