ಬಿಜೆಪಿ-ಜೆಡಿಎಸ್ ಮೈತ್ರಿ; ಅನ್ನ ಹಳಸಿತ್ತು, ನಾಯಿ ಹಸಿದಿತ್ತು: ದಿನೇಶ್ ಗುಂಡೂರಾವ್

Prasthutha|

ಬೆಂಗಳೂರು: ಲೋಕಸಭಾ ಚುನಾವಣೆಗೆ ಬಿಜೆಪಿ ಮತ್ತು ಜೆಡಿಎಸ್‌ ಪಕ್ಷಗಳು ಮೈತ್ರಿ ಮಾಡಿಕೊಳ್ಳಲಿವೆ ಎಂಬ ಸುದ್ದಿಗೆ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಪ್ರತಿಕ್ರಿಯಿಸಿದ್ದಾರೆ.

- Advertisement -


ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಕೋಮುವಾದಿ ಬಿಜೆಪಿಯೊಂದಿಗೆ ಜಾತ್ಯತೀತ ಲೇಬಲ್ ಅಂಟಿಸಿಕೊಂಡಿರುವ ಜೆಡಿಎಸ್ ಮೈತ್ರಿಗೆ ಮುಂದಾಗಿದೆ. ಜಾತ್ಯಾತೀತ ತತ್ವ ಎಂಬುದು ಜೆಡಿಎಸ್ ಪಕ್ಷದ ಬೂಟಾಟಿಕೆಯಷ್ಟೆ.ಯಾವುದೇ ಸೈದಾಂತಿಕ ಬದ್ಧತೆಯಿಲ್ಲದ ಪಕ್ಷವೆಂದರೆ ಅದು ಜೆಡಿಎಸ್ ಮಾತ್ರ. ಜಾತ್ಯಾತೀತ ಸಿದ್ದಾಂತಕ್ಕೆ ತಿಲಾಂಜಲಿ ಇಟ್ಟು ಕೋಮುವಾದಿ ಪಕ್ಷದ ಜೊತೆ ಕೈ ಜೋಡಿಸುತ್ತಿರುವ ಜೆಡಿಎಸ್ ಗೆ ಗೆ ಯಾವ ಸಿದ್ಧಾಂತವಿದೆ? ಎಂದು ಪ್ರಶ್ನಿಸಿದ್ದಾರೆ.


ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ, ಎರಡೂ ಪಕ್ಷದವರಿಗೂ ಅನ್ನ ಹಳಸಿತ್ತು., ನಾಯಿ ಹಸಿದಿತ್ತು ಎಂಬಂತಾಗಿದೆ. ರಾಜ್ಯದಲ್ಲಿ BJP ದಿಕ್ಕಿಲ್ಲದ ದೋಣಿ ಹಾಗೂ JDS ಹಳಿಯಿಲ್ಲದ ರೈಲಿನಂತಾಗಿದೆ. ಇಂತಹ ಅಸಹಾಯಕ ಪರಿಸ್ಥಿತಿಯಲ್ಲಿರುವ ಎರಡೂ ಪಕ್ಷಗಳು ಮೈತ್ರಿ ಮಾಡಿಕೊಂಡು ರಾಜಕೀಯ ಆತ್ಮಹತ್ಯೆ ಮಾಡಿಕೊಳ್ಳಲು ಹೊರಟಿವೆ ಎಂದು ಗೇಲಿ ಮಾಡಿದ್ದಾರೆ.

- Advertisement -



Join Whatsapp