ಬಿಜೆಪಿ-ಜೆಡಿಎಸ್ ಮೈತ್ರಿ, ಈ ಬಗ್ಗೆ ಇನ್ನೂ ಅಂತಿಮ ನಿರ್ಧಾರವಾಗಿಲ್ಲ: ಸಿಟಿ ರವಿ

Prasthutha|

ಬೆಂಗಳೂರು: 2024ರ ಸಾರ್ವತ್ರಿಕ ಚುನಾವಣೆಗೆ ಬಿಜೆಪಿ-ಜೆಡಿಎಸ್ ಮೈತ್ರಿ ಬಗ್ಗೆ ಅಂತಿಮ ನಿರ್ಧಾರ ಕೈಗೊಂಡಿಲ್ಲ. ಈ ವಿಷಯದ ಬಗ್ಗೆ ಅಂತಿಮ ನಿರ್ಧಾರವನ್ನು ಬಿಜೆಪಿಯ ಹೈಕಮಾಂಡ್ ತೆಗೆದುಕೊಳ್ಳುತ್ತದೆ ಮತ್ತು ಎಲ್ಲರೂ ಅದರ ನಿರ್ದೇಶನವನ್ನು ಅನುಸರಿಸುವ ನಿರೀಕ್ಷೆಯಿದೆ ಎಂದು ಮಾಜಿ ಸಚಿವ ಸಿಟಿ ರವಿ ಭಾನುವಾರ ಹೇಳಿದ್ದಾರೆ.

- Advertisement -


ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಮಾಧ್ಯಮ ವರದಿಗಳ ಮೂಲಕವೇ ಈ ವಿಚಾರ ನನಗೆ ತಿಳಿಯಿತು. ‘ಈ ಬಗ್ಗೆ ಅಂತಿಮ ನಿರ್ಧಾರವನ್ನು ತೆಗೆದುಕೊಂಡರೆ, ಅದನ್ನು ಖಂಡಿತವಾಗಿಯೂ ಘೋಷಿಸಲಾಗುವುದು. ಆದರೆ, ಈಗ ನಾವು ಕಾಯಬೇಕಿದೆ. ಯಡಿಯೂರಪ್ಪ ಮತ್ತು ಕುಮಾರಸ್ವಾಮಿ ಮಾಧ್ಯಮಗಳಿಗೆ ಹೇಳಿದ್ದನ್ನು ನೋಡಿದ್ದೇನೆ. ಮೈತ್ರಿ ಬಗ್ಗೆ ನನಗೆ ಯಾವುದೇ ಅಧಿಕೃತ ಮಾಹಿತಿ ಇಲ್ಲ’ ಎಂದರು.

Join Whatsapp