ದಾವಣಗೆರೆ: ಬಿಜೆಪಿ ಮತ್ತು ಜೆಡಿಎಸ್ ನಡುವಿನ ಮೈತ್ರಿ ಕೇವಲ ಲೋಕಸಭಾ ಕ್ಷೇತ್ರಕ್ಕೆ ಮಾತ್ರ ಸೀಮಿತವಾಗಿಲ್ಲ, ಮುಂಬರುವ ಎಲ್ಲ ಚುನಾವಣೆಗಳಲ್ಲಿ ಮೈತ್ರಿ ಮುಂದುವರಿಯಲಿರುವ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮತ್ತು ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ನಡುವೆ ಮಾತುಕತೆಯಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ಹೇಳಿದರು.
ಇಂದು ದಾವಣಗರೆ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ಪರ ಪ್ರಚಾರ ಮಾಡುವಾಗ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದರು.
ಹೆಚ್ ಡಿ ಕುಮಾರಸ್ವಾಮಿಯವರು ಮಹಿಳೆಯರು ದಾರಿ ತಪ್ಪುತ್ತಿದ್ದಾರೆ ಹೇಳಿಕೆಯ ಬಗ್ಗೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದ ಅವರು, ಕುಮಾರಸ್ವಾಮಿ ಈಗಾಗಲೇ ಸ್ಪಷ್ಟನೆ ನೀಡಿರುವುದರಿಂದ ಪ್ರತಿಕ್ರಿಯಿಸುವ ಅವಶ್ಯಕತೆಯಿಲ್ಲ ಎಂದರು. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳು ಪಕ್ಷದ ಕೈ ಹಿಡಿಯಲಿವೆ ಎಂದು ಕಾಂಗ್ರೆಸ್ ನಾಯಕರು ಹೇಳುತ್ತಿದ್ದಾರೆ ಅಂತ ಕೇಳಿದ್ದಕ್ಕೆ ಯಡಿಯೂರಪ್ಪ, ಪ್ರಧಾನಿ ನರೇಂದ್ರ ಮೋದಿಯವರ ಅಲೆಯೆದರು ಎಲ್ಲ ಗ್ಯಾರಂಟಿ ಯೋಜನೆಗಳು ಸ್ತಬ್ಧಗೊಳ್ಳಲಿವೆ ಎಂದರು.