ಬಿಜೆಪಿ-ಜೆಡಿಎಸ್ ಹಿಂದೆ ಮೈತ್ರಿಯಾದಾಗ ಮುಸ್ಲಿಮರಿಗೆ ಸಮಸ್ಯೆಯಾಗಿತ್ತಾ: ಬಿ.ಎಂ.ಫಾರೂಕ್ ಪ್ರಶ್ನೆ

Prasthutha|

- Advertisement -

ರಾಮನಗರ: ಹಿಂದೆ ಬಿಜೆಪಿ ಜೊತೆ ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದಾಗ, ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಅವರು 20 ತಿಂಗಳು ಯಶಸ್ವಿಯಾಗಿ ಅಧಿಕಾರ ನಡೆಸಿದ್ದರು. ಆಗ, ಮುಸ್ಲಿಮರಿಗೇನಾದರೂ ಸಮಸ್ಯೆಯಾಗಿತ್ತಾ? ಎಂದು ವಿಧಾನ ಪರಿಷತ್‌ ಸದಸ್ಯ ಬಿ.ಎಂ. ಫಾರೂಕ್ ಪ್ರಶ್ನಿಸಿದರು.

ಈ ಬಗ್ಗೆ ಮಾತನಾಡಿದ ಅವರು, ಅಲ್ಪಸಂಖ್ಯಾತರಾದ ನಾವು ನಮ್ಮ ಆಚಾರ ವಿಚಾರ, ಆಹಾರ ಪದ್ಧತಿ ಇತ್ಯಾದಿಗಳಿಂದ ಕೆಲವು ಸಮಸ್ಯೆ ಎದುರಿಸುತ್ತಿದ್ದೇವೆ. ಆ ವಿಷಯದಲ್ಲಿ ಪಕ್ಷ ನಮ್ಮ ಜತೆ ನಿಂತಿದೆ. ಯಾರೇ ಪಕ್ಷ ಬಿಟ್ಟರೂ ನಾನು ಪಕ್ಷ ಬಿಡಲ್ಲ. ಇಪ್ಪತ್ತು ತಿಂಗಳ ಬಿಜೆಪಿ-ಜೆಡಿಎಸ್ ಮೈತ್ರಿ ಸರ್ಕಾರದ ಕಾಲದಲ್ಲಿ ಅಲ್ಪಸಂಖ್ಯಾತರಿಗೆ ಏನಾದರೂ ತೊಂದರೆ ಆಯಿತಾ? ಕುಮಾರಸ್ವಾಮಿ ಅನೇಕ ಸೌಲಭ್ಯಗಳನ್ನು ಮಾಡಿಕೊಟ್ಟರು. ಎಲ್ಲೂ ಕೂಡ ನಮಗೆ ಜೆಡಿಎಸ್ ಅಥವಾ ಕುಮಾರಸ್ವಾಮಿ ಅವರಿಂದ ಅನ್ಯಾಯ ಆಗಿಲ್ಲ. ನಮ್ಮ ಸಿದ್ಧಾಂತದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಭರವಸೆ ನೀಡಿದ್ದಾರೆ ಫಾರೂಕ್ ಎಂದು ಹೇಳಿದ್ದಾರೆ.

Join Whatsapp