ಸ್ಪೀಕರ್ ಶಿಷ್ಟಾಚಾರ ಉಲ್ಲಂಘನೆ ಆರೋಪ: ಬಿಜೆಪಿ-ಜೆಡಿಎಸ್ ನಿಯೋಗದಿಂದ ರಾಜ್ಯಪಾಲರಿಗೆ ದೂರು

Prasthutha|

ಬೆಂಗಳೂರು: ಸ್ಪೀಕರ್ ಶಿಷ್ಟಾಚಾರ ಉಲ್ಲಂಘನೆ ಆರೋಪಿಸಿ ಹಾಗೂ ಬಿಜೆಪಿ ಶಾಸಕರ ಅಮಾನತು ಖಂಡಿಸಿ ಬಿಜೆಪಿ-ಜೆಡಿಎಸ್ ನಿಯೋಗವು ವಿಧಾನಸೌಧದಿಂದ ರಾಜಭವನಕ್ಕೆ ಕಾಲ್ನಡಿಗೆ ಮೂಲಕ ತೆರಳಿ ರಾಜ್ಯಪಾಲರಿಗೆ ದೂರು ನೀಡಿದರು.

- Advertisement -


ರಾಜ್ಯಪಾಲರ ಭೇಟಿ ಬಳಿಕ ಮಾಧ್ಯಮದವರ ಜೊತೆಗೆ ಮಾತನಾಡಿದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಕಳೆದ ಮೂರು ವಾರದಲ್ಲಿ ಸದನದಲ್ಲಿ ನಡೆದ ಬೆಳವಣಿಗೆಗಳ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ರಾಜ್ಯಪಾಲರಿಗೆ ನೀಡಿದ್ದೇವೆ. ಏಕಕಾಲದಲ್ಲಿ 10 ಜನರನ್ನು ಅಮಾನತು ಮಾಡಿರುವುವುದು ಕರ್ನಾಟಕ ವಿಧಾನಸಭೆ ಇತಿಹಾಸದಲ್ಲಿಯೇ ಇಲ್ಲ. ಇದು ಸರ್ಕಾರದ ಸರ್ವಾಧಿಕಾರಿ ಧೋರಣೆಯಾಗಿದೆ. ವಿರೋಧ ಪಕ್ಷವನ್ನು ಹತ್ತಿಕ್ಕುವ ಕೆಲಸ ಮಾಡಲಾಗುತ್ತಿದೆ ಎಂದು ಆರೋಪಿಸಿದರು.


ಸರ್ಕಾರ ಶಾಶ್ವತ ಅಧಿಕಾರದಲ್ಲಿ ಇದ್ದೇವೆ ಎಂದು ತಿಳಿದುಕೊಂಡಿದ್ದಾರೆ. ಸಚಿವರ ವರ್ತನೆ ಹಾಗೂ ಹೇಳಿಕೆಗಳನ್ನು ನೋಡುವಾಗ ತುರ್ತು ಪರಿಸ್ಥಿತಿ ನೆನಪಾಗುತ್ತದೆ. ಪೊಲೀಸ್ ಠಾಣೆಗೆ ಬರಲು ಜನ ಭಯಪಡುತ್ತಿದ್ದಾರೆ. ವಿಪಕ್ಷಗಳ ಒಕ್ಕೂಟದ ಸಭೆಗೆ ಆಗಮಿಸಿದ ಅತಿಥಿಗಳನ್ನು ಸ್ವಾಗತ ಮಾಡುವ ಶಿಷ್ಟಾಚಾರದ ಬಗ್ಗೆ ಸರ್ಕಾರ ನಡೆದುಕೊಂಡ ರೀತಿ ಹಾಗೂ ಅದಕ್ಕೆ ಸ್ಪೀಕರ್ ಕೂಡಾ ಧ್ವನಿಗೂಡಿಸಿದ್ದಾರೆ ಎಂದು ಬೊಮ್ಮಾಯಿ ಕಿಡಿಕಾರಿದರು.

Join Whatsapp