ಬಿಜೆಪಿ, ಜೆಡಿಎಸ್ ನೀರಿನಿಂದ ಹೊರಬಿದ್ದ ಮೀನಿನಂತೆ ಆಡುತ್ತಿವೆ: ಸಿದ್ದರಾಮಯ್ಯ

Prasthutha|

ಬೆಳಗಾವಿ: ಕಾಂಗ್ರೆಸ್ ಸರ್ಕಾರ ಪತನವಾಗುತ್ತದೆ ಎಂಬ ಎಚ್ ಡಿ ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಬಿಜೆಪಿ ಮತ್ತು ಜೆಡಿಎಸ್ ಕಾಂಗ್ರೆಸ್ ಸರ್ಕಾರ ಪತನದ ಬಗ್ಗೆ ಭ್ರಮೆಯಲ್ಲಿದೆ ಎಂದು ಸೋಮವಾರ ಹೇಳಿದ್ದಾರೆ.

- Advertisement -

2024 ರ ಲೋಕಸಭೆ ಚುನಾವಣೆಯಲ್ಲಿ ಆಡಳಿತಾರೂಢ ಕಾಂಗ್ರೆಸ್ ವಿರುದ್ಧ ಹೋರಾಡಲು ಕರ್ನಾಟಕದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಕೈಜೋಡಿಸಿ ಮೈತ್ರಿ ಮಾಡಿಕೊಂಡಿವೆ. “ಬಿಜೆಪಿ ಮತ್ತು ಜೆಡಿಎಸ್ ನೀರಿನಿಂದ ಹೊರಬಂದ ಮೀನಿನಂತೆ ಹೋರಾಡುತ್ತಿವೆ. ಅವರು ಕಾಂಗ್ರೆಸ್ ಸರ್ಕಾರ ಬೀಳುತ್ತದೆ ಎಂಬ ಭ್ರಮೆಯಲ್ಲಿದ್ದಾರೆ. ಏನು ಮಾಡುವುದು? ಎಂದರು.

ಸುವರ್ಣ ವಿಧಾನಸೌಧದ ಸಭಾಂಗಣದಲ್ಲಿ ಸಾವರ್ಕರ್ ಭಾವಚಿತ್ರ ತೆಗೆಯುವಂತೆ ಸಚಿವ ಪ್ರಿಯಾಂಕ್ ಖರ್ಗೆ ಒತ್ತಾಯಿಸಿರುವ ಕುರಿತು ಸಿದ್ದರಾಮಯ್ಯ ಅವರು, ಇದು ಸ್ಪೀಕರ್ ಗೆ ಸಂಬಂಧಿಸಿದ ವಿಚಾರ. ಪ್ರತಿಪಕ್ಷಗಳು ಎತ್ತುವ ಎಲ್ಲಾ ವಿಷಯಗಳಿಗೆ ಸ್ಪಂದಿಸಲು ಸರ್ಕಾರ ಸಿದ್ಧವಿದೆ. ತಮ್ಮ ಸರ್ಕಾರದ ಕಡೆಯಿಂದ ಯಾವುದೇ ವಿಳಂಬ ಅಥವಾ ಸಮಯ ವ್ಯರ್ಥ ಮಾಡುವ ಪ್ರಶ್ನೆಯೇ ಇಲ್ಲ ಎಂದು ಹೇಳಿದರು.



Join Whatsapp