ಬಿಜೆಪಿ ಜೊತೆ ಮೈತ್ರಿ | ಜೆಡಿಎಸ್‍ನ ಮತ್ತೊಂದು ವಿಕೆಟ್ ಪತನ: ಮಾಜಿ ಶಾಸಕ ಶಫಿ ಅಹಮದ್ ರಾಜೀನಾಮೆ

Prasthutha|

- Advertisement -

ತುಮಕೂರು: ಜೆಡಿಎಸ್​, ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿದ್ದು, ಜೆಡಿಎಸ್​ ನಾಯಕರು ಒಬ್ಬೊಬ್ಬರಾಗಿಯೇ ಪಕ್ಷ ತೊರೆಯುತ್ತಿದ್ದಾರೆ.

ಇದೀಗ ತುಮಕೂರಿನಲ್ಲಿ‌ ಜೆಡಿಎಸ್​ನ ಮತ್ತೊಂದು ವಿಕೆಟ್​ ಪತನವಾಗಿದೆ. ಅಲ್ಪಸಂಖ್ಯಾತ ಸಮುದಾಯದ ಮುಖಂಡ ಹಾಗೂ ಮಾಜಿ ಶಾಸಕ ಶಫಿ ಅಹಮದ್ ಜೆಡಿಎಸ್​ ಗೆ ರಾಜೀನಾಮೆ ನೀಡಿದ್ದಾರೆ.

- Advertisement -

ಜೆಡಿಎಸ್ ಪ್ರಾಥಮಿಕ ಸದಸ್ಯತ್ವ ಹಾಗೂ ರಾಜ್ಯಾ ಉಪಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಶಫೀ ಅಹಮದ್ ರಾಜೀನಾಮೆ ನೀಡಿದ್ದು, ರಾಜೀನಾಮೆ ಪತ್ರವನ್ನು ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ ಹಾಗೂ ಜಿಲ್ಲಾ ಅಧ್ಯಕ್ಷರಿಗೆ ರವಾನಿಸಿದ್ದಾರೆ. ಅಲ್ಲದೇ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್​ಡಿ ಕುಮಾರಸ್ವಾಮಿ, ಹೆಚ್​ಡಿ ದೇವೇಗೌಡ ಅವರಿಗೆ ವಾಟ್ಸಪ್ ಮಾಡಿದ್ದಾರೆ.

Join Whatsapp