ಘರ್ ವಾಪ್ಸಿ ಅಂತ ಮಾಡುವುದಕ್ಕೆ ಹೋದರೆ ಬಿಜೆಪಿ, ಜೆಡಿಎಸ್ ಅರ್ಧ ಖಾಲಿಯಾಗುತ್ತೆ: ಪ್ರಿಯಾಂಕ್ ಖರ್ಗೆ

Prasthutha|

ಬೆಂಗಳೂರು: ಘರ್ ವಾಪ್ಸಿ ಎಂದು ಮಾಡುವುದಕ್ಕೆ ಹೋದರೆ ಅರ್ಧ ಬಿಜೆಪಿ ಮತ್ತು ಅರ್ಧ ಜೆಡಿಎಸ್ ಖಾಲಿಯಾಗುತ್ತದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

- Advertisement -


ಈ ಬಗ್ಗೆ ನಗರದಲ್ಲಿ ಮಾತನಾಡಿದ ಅವರು, ವಲಸಿಗರ ವಿಚಾರ ಸಾಕಷ್ಟು ಚರ್ಚೆ ಆಗಿದೆ. ಡಿಸಿಎಂ ಹಾಗೂ ಸಿಎಂ ಈ ಬಗ್ಗೆ ತಿಳಿಸಿದ್ದಾರೆ.

ನಮ್ಮ ಪಕ್ಷದ ತತ್ವ ಸಿದ್ಧಾಂತ ಒಪ್ಪಿದರೆ ಯಾವುದೇ ಕಂಡಿಷನ್ ಇಲ್ಲದೆ ಬಂದರೆ ಸ್ವಾಗತ ಇದೆ. ನಾವು ಆಪರೇಷನ್ ಹಸ್ತ ಮಾಡುವುದಕ್ಕೆ ಹೊರಟಿಲ್ಲ. ಬಿಜೆಪಿ, ಜೆಡಿಎಸ್ ಒಡೆಯಲು ಹೋಗುತ್ತಿಲ್ಲ. ಯಾರ ಯಾರ ಅಸ್ತಿತ್ವ ಏನೂ ಅನ್ನೋದನ್ನು ಜನರೇ ತೋರಿಸಿಕೊಟ್ಟಿದ್ದಾರೆ. ಬಿಜೆಪಿ ಹಾಗೂ ಜೆಡಿಎಸ್ ನವರು ಅವರವರ ಅಸ್ತಿತ್ವ ಕಾಪಾಡಿಕೊಂಡು ಹೋದರೆ ಸಾಕು ಎಂದು ತಿರುಗೇಟು ಕೊಟ್ಟಿದ್ದಾರೆ.

Join Whatsapp