ಬೆಂಗಳೂರು: ಸರ್ಕಾರದ ವಿರುದ್ಧ ಜೆಡಿಎಸ್ ಬಿಜೆಪಿ ಮೈತ್ರಿಕೂಟ ಮುಂಬರುವ ವಿಧಾನ ಮಂಡಲ ಅಧಿವೇಶನದಲ್ಲಿ ಜಂಟಿಯಾಗಿ ಹೋರಾಟ ನಡೆಸಲಿದೆ ಎಂದು ಕೇಂದ್ರದ ಭಾರೀ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.
ಎನ್ ಡಿಎ ಮೈತ್ರಿಕೂಟದ ಸಮನ್ವಯ ಸಭೆಯ ನಂತರ ಪ್ರತಿಪಕ್ಷ ನಾಯಕ ಆರ್.ಅಶೋಕ್ ಅವರೊಂದಿಗೆ ಮಾಧ್ಯಮಗಳನ್ನು ಉದ್ದೇಶಿಸಿ ಕುಮಾರಸ್ವಾಮಿ ಮಾತನಾಡಿದರು.
ಈ ಸರ್ಕಾರ ಆರಂಭದಿಂದಲೂ ಹಗರಣಗಳಲ್ಲಿಯೇ ಮುಳುಗಿದೆ. ಮುಡಾ ಹಗರಣ, ವಾಲ್ಮೀಕಿ ನಿಗಮದ ಹಗರಣ, ವರ್ಗಾವಣೆ ದಂಧೆ, ಪರಿಶಿಷ್ಟ ಜಾತಿ ವರ್ಗದ ಹಣ ದುರ್ಬಳಕೆ, ರೈತರ ಆತ್ಮಹತ್ಯೆ ಪ್ರಕರಣಗಳು ಸೇರಿದಂತೆ ಅನೇಕ ವಿಷಯಗಳ ಬಗ್ಗೆ ನಮ್ಮ ಮೈತ್ರಿಕೂಟ ಸದನದಲ್ಲಿ ಹೋರಾಟ ನಡೆಸಲಿದೆ ಎಂದು ಹೇಳಿದರು.
ಕಾಂಗ್ರೆಸ್ ಸರಕಾರ ಬಂದ ಮೇಲೆ ಅಭಿವೃದ್ಧಿ ವಿಷಯದಲ್ಲಿ ರಾಜ್ಯವು ಹತ್ತು ವರ್ಷಗಳಷ್ಟು ಹಿಂದಕ್ಕೆ ಹೋಗಿದೆ ಎಂದರು.