ಗದಗ: ಬಿಜೆಪಿಯ ಹಿರಿಯ ಕಾರ್ಯಕರ್ತನೋರ್ವ ಆರ್ ಎಸ್ ಎಸ್ ಗಣ ವೇಷದಲ್ಲೇ ಬಂದು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.
ಇಂದು ಗದಗ ಜಿಲ್ಲೆಯ ನರಗುಂದದಲ್ಲಿ ನಡೆದ ಕಾರ್ಯಕರ್ತರ ಸಮಾವೇಶದಲ್ಲಿ ರೋಣ ತಾಲೂಕಿನ ಮೆಣಸಗಿ ಗ್ರಾಮದ ನಿಂಗಬಸಪ್ಪ ಬಾಣದ್ ಎನ್ನುವ ಆರ್ ಎಸ್ ಎಸ್ ಸ್ವಯಂ ಸೇವಕ ಕಾಂಗ್ರೆಸ್ ಸೇರ್ಪಡೆಯಾದರು.
ಮೂವತ್ತು ವರ್ಷದಿಂದ ಆರ್ಎಸ್ಎಸ್ ಸಕ್ರೀಯ ಕಾರ್ಯಕರ್ತರಾಗಿರುವ ಬಾಣದ್ ಅವರು ಗಣವೇಷದಲ್ಲೇ ಕಾಂಗ್ರೆಸ್ ಶಾಲು ಹಾಕಿಕೊಂಡಿದ್ದಾರೆ
ಮಾಜಿ ಶಾಸಕ ಎಸ್ ಜಿ ನಂಜಯ್ಯನಮಠ ಸಮ್ಮುಖದದಲ್ಲಿ ನಿಂಗಬಸಪ್ಪ ಬಾಣದ್ ಅವರು ಬಿಜೆಪಿ ತೊರೆದು ಕೈ ಹಿಡಿದಿದರು. ಇನ್ನು ಸಚಿವ ಶಿವಾನಂದ ಪಾಟೀಲ, ಮಾಜಿ ಸಚಿವ ಬಿಆರ್ ಯಾವಗಲ್ ಅವರು ನಿಂಗಬಸಪ್ಪ ಬಾಣದ್ ಅವರ ತಲೆ ಮೇಲಿನ ಕಪ್ಪು ಟೋಪಿ ತೆಗೆದು ಖಾದಿ ಗಾಂಧಿ ಟೋಪಿ ಹಾಕಿ ಕಾಂಗ್ರೆಸ್ ಶಾಲು ಹಾಕುವ ಮೂಲಕ ಪಕ್ಷಕ್ಕೆ ಸ್ವಾಗತ ಮಾಡಿಕೊಂಡರು.
ಕಾಂಗ್ರೆಸ್ ಸೇರ್ಪಡೆ ಬಳಿಕ ಮಾತನಾಡಿದ ನಿಂಗಬಸಪ್ಪ ಬಾಣದ್, ಬಿಜೆಪಿ ನರಗುಂದ ಮತ ಕ್ಷೇತ್ರದಲ್ಲಿ ಹಣ ಹಂಚಿಚುನಾವಣೆ ಮಾಡಿದೆ. ಭ್ರಷ್ಟಾಚಾರ ವಿರೋಧಿಯಾಗಿ ಬಿಜೆಪಿ ಪಕ್ಷ ತೊರೆದಿದ್ದೇನೆ. ಪ್ರಧಾನಿ ನರೇಂದ್ರ ಮೋದಿ ಕಪ್ಪು ಹಣ ತರುತ್ತೇನೆ ಅಂತಾರೆ. ಆದ್ರೆ ಕಾಂಗ್ರೆಸ್ ನಾಯಕರ ಮೇಲೆ ಐಟಿ ದಾಳಿ ಮಾಡಿಸುತ್ತಾರೆ ಎಂದು ಟೀಕಿಸಿದರು.