ಬಿಜೆಪಿಗೆ ಮಾಜಿ ಶಾಸಕ ಕಿರಣ್ ಕುಮಾರ್ ರಾಜೀನಾಮೆ

Prasthutha|

- Advertisement -

ತುಮಕೂರು: ಬಿಜೆಪಿಯಲ್ಲಿ ಭಿನ್ನಮತ ಸ್ಫೋಟಗೊಂಡ ಹಿನ್ನೆಲೆಯಲ್ಲಿ ಮಾಜಿ ಶಾಸಕ ಕಿರಣ್ ಕುಮಾರ್ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.

ಅಲ್ಲದೇ ಜೈವಿಕ ಇಂಧನ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಸ್ಥಾನಕ್ಕೂ ರಾಜೀನಾಮೆ ನೀಡಿದ್ದಾರೆ.

- Advertisement -

ಕಿರಣ್ ಕುಮಾರ್ ಚಿಕ್ಕನಾಯಕನಹಳ್ಳಿ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಪ್ರಬಲ ಆಕಾಂಕ್ಷಿಯಾಗಿದ್ದರು. ಆದರೆ ಮಾಧುಸ್ವಾಮಿಯವರನ್ನು ಹೊರತುಪಡಿಸಿ ಇನ್ನಾರಿಗೂ ಟಿಕೆಟ್ ಕೊಡುವ ಸಾಧ್ಯತೆ ಇಲ್ಲ. ಆದ್ದರಿಂದ ಚಿಕ್ಕನಾಯಕನಹಳ್ಳಿ ಕ್ಷೇತ್ರದಲ್ಲಿ ತಮ್ಮ ಅಸ್ತಿತ್ವಕ್ಕಾಗಿ ಹೋರಾಟ ನಡೆಸುತಿದ್ದ ಮಾಜಿ ಶಾಸಕ ಕಿರಣ್ ಕುಮಾರ್ ಕಾಂಗ್ರೆಸ್ ನತ್ತ ಮುಖ ಮಾಡಿದ್ದಾರೆ.

ಸೋಮವಾರ ಕೆಪಿಸಿಸಿ ಅಧ್ಯಕ್ಷರ ಸಮ್ಮುಖದಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಸದಸ್ಯತ್ವ ಪಡೆಯಲಿದ್ದಾರೆ ಎಂದು ತಿಳಿದು‌ ಬಂದಿದೆ.

Join Whatsapp