ಯದುವೀರಗೆ ಬಿಜೆಪಿ ಗಾಳ: ಪ್ರತಾಪ ಸಿಂಹಗೆ ತಳಮಳ!

Prasthutha|

ಮೈಸೂರು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಿಂದ ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರನ್ನು ಕಣಿಕ್ಕಿಳಿಸುವ ಬಗ್ಗೆ ಬಿಜೆಪಿ ಯೋಜಿಸಿದ್ದು, ಅವರೊಂದಿಗೆ ಮಾತುಕತೆ ಕೂಡ ನಡೆಸಿದೆ. ಈ ಬೆಳವಣಿಗೆಯಿಂದ ಪ್ರತಾಪ ಸಿಂಹ ಅವರಿಗೆ ಟಿಕೆಟ್‌ ಕೈತಪ್ಪುವ ಭೀತಿ ಎದುರಾಗಿದೆ ಎಂದು ತಿಳಿದುಬಂದಿದೆ.

- Advertisement -

ಈಗಾಗಲೇ ಹಾಲಿ ಸಂಸದ ಪ್ರತಾಪ ಸಿಂಹ ಅವರೊಂದಿಗೆ ಯದುವೀರರ ಹೆಸರನ್ನೂ ಶಿಫಾರಸು ಮಾಡಲಾಗಿದೆ ಎಂದೂ ತಿಳಿದುಬಂದಿದೆ.

ಯದುವೀರರವರವತಾಯಿ ಪ್ರಮೋದಾದೇವಿ ಒಡೆಯರ್ ಹಾಗೂ ಪ್ರಧಾನಿ ನರೇಂದ್ರ ಮೋದಿ ಸಮ್ಮತಿಸಿದರೆ, ಅವರಿಗೇ ಟಿಕೆಟ್‌ ನೀಡಲು ಮುಖಂಡರು ಚಿಂತನೆ ನಡೆಸಿದ್ದು,. ಪ್ರತಾಪ ಸಿಂಹ ಅವರಿಗೆ ಟಿಕೆಟ್‌ ಕೈತಪ್ಪುವ ತಳಮಳ ಎದುರಾಗಿದೆ.

- Advertisement -

ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರ‍ಪ್ಪ ಮತ್ತು ಆರ್‌ಎಸ್‌ಎಸ್‌ ನಾಯಕರು ಯದುವೀರರ ಹೆಸರನ್ನು ಪ್ರಸ್ತಾಪಿಸಿದ್ದಾರೆ. ಮೈಸೂರು ರಾಜವಂಶಸ್ಥರ ಕೊಡುಗೆಗಳನ್ನು ಜನ ಗೌರವದಿಂದ ಸ್ಮರಿಸುತ್ತಾರೆ. ಅದನ್ನು ರಾಜಕೀಯ ಲಾಭವನ್ನಾಗಿಸಿಕೊಳ್ಳುವುದು ಬಿಜೆಪಿ ನಾಯಕರ ಯೋಚನೆತಾಗಿದೆ. ಯದುವೀರ ಸ್ಪರ್ಧಿಸಿದರೆ ಮೈಸೂರು-ಕೊಡಗು ಕ್ಷೇತ್ರದೊಂದಿಗೆ ಚಾಮರಾಜನಗರ, ಮಂಡ್ಯ ಹಾಗೂ ಹಾಸನದಲ್ಲೂ ಪಕ್ಷಕ್ಕೆ ಅನುಕೂಲವಾಗಬಹುದೆಂಬುದು ಲೆಕ್ಕಾಚಾರ ಮಾಡಲಾಗಿದೆ. ಯಡಿಯೂರಪ್ಪ ಹೈಕಮಾಂಡ್‌ ಮಟ್ಟದಲ್ಲೂ ಇದನ್ನು ಮನವರಿಕೆ ಮಾಡಿಕೊಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ.

Join Whatsapp
Exit mobile version