ಬಳ್ಳಾರಿ: ಪಾಕ್ ಪರ ಘೋಷಣೆ ಕೂಗಿದ್ದಾರೆಂಬ ಆರೋಪದ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತರು ಬುಧವಾರ ಕಪ್ಪು ಪಟ್ಟಿ ಧರಿಸಿ ರಾಜ್ಯಸಭಾ ಸದಸ್ಯ ನಾಸಿರ್ ಹುಸೇನ್ ಕಚೇರಿಗೆ ಮುತ್ತಿಗೆ ಹಾಕಿದರು.
ನಗರದ ಮೋತಿ ಸರ್ಕಲ್ ನಲ್ಲಿ ಮೊದಲಿಗೆ ಪ್ರತಿಭಟನೆ ನಡೆಸಿದ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು, ನಂತರ ಮೆರವಣಿಗೆ ಮೂಲಕ ಬುಡಾ ಕಟ್ಟಡದಲ್ಲಿರುವ ನಾಸಿರ್ ಹುಸೇನ್ ಕಚೇರಿಯತ್ತ ತೆರಳಿದರು.
ಈ ವೇಳೆ ಪೊಲೀಸರು ಅವರನ್ನು ತಡೆಯುವ ಪ್ರಯತ್ನ ನಡೆಸಿದರು. ಆಗ ಪೊಲೀಸರು ಮತ್ತು ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆಯಿತು.