ಸಿದ್ದರಾಮಯ್ಯ ಭೇಟಿಯಾದ ಬಿಜೆಪಿ ಮುಖಂಡ ಎ.ಮಂಜು: ಕಾಂಗ್ರೆಸ್‌ ಸೇರ್ಪಡೆ ಸಾಧ್ಯತೆ ?

Prasthutha|

ಬೆಂಗಳೂರು: ಮಾಜಿ ಸಚಿವ ಎ.ಮಂಜು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಶುಕ್ರವಾರ ಭೇಟಿ ಮಾಡಿ ಚರ್ಚಿಸಿರುವುದು ಕುತೂಹಲ ಮೂಡಿಸಿದೆ.

- Advertisement -

ಎ.ಮಂಜು ಅವರ ಸೇರ್ಪಡೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಒಪ್ಪಿಗೆ ನೀಡಿದ್ದಾರೆ ಎಂದು ತಿಳಿದು ಬಂದಿದೆ. ಇತ್ತೀಚೆಗೆ ನಡೆದ ವಿಧಾನಪರಿಷತ್‌ ಚುನಾವಣೆಯಲ್ಲಿ ಎ.ಮಂಜು ಅವರ ಪುತ್ರ ಮಂಥರ್‌ ಗೌಡ ಅವರಿಗೆ ಕೊಡಗು ಕ್ಷೇತ್ರದಿಂದ ಕಾಂಗ್ರೆಸ್‌ ಟಿಕೆಟ್‌ ನೀಡಲಾಗಿತ್ತು.

ಕಳೆದ ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್‌ ಸೇರಿ ಬಿಜೆಪಿ ಸೇರಿದ್ದ ಎ.ಮಂಜು ಮತ್ತೆ ಕಾಂಗ್ರೆಸ್‌ ಸೇರ್ಪಡೆಗೆ ಒಲವು ತೋರಿದ್ದಾರೆ ಎನ್ನಲಾಗಿದೆ.

Join Whatsapp