Home ಟಾಪ್ ಸುದ್ದಿಗಳು ಪತ್ರಕರ್ತೆಯೊಂದಿಗೆ ಅನುಚಿತ ವರ್ತನೆ ಆರೋಪ: ಕ್ಷಮೆಯಾಚಿಸಿದ ಬಿಜೆಪಿ ಮುಖಂಡ

ಪತ್ರಕರ್ತೆಯೊಂದಿಗೆ ಅನುಚಿತ ವರ್ತನೆ ಆರೋಪ: ಕ್ಷಮೆಯಾಚಿಸಿದ ಬಿಜೆಪಿ ಮುಖಂಡ

ಕೋಯಿಕ್ಕೋಡ್: ಪತ್ರಿಕಾಗೋಷ್ಠಿಯಲ್ಲಿ ಅಸಭ್ಯವಾಗಿ ವರ್ತಿಸಿದ ಆರೋಪದ ಮೇರೆಗೆ ಬಿಜೆಪಿ ಮುಖಂಡ ಹಾಗೂ ನಟ ಸುರೇಶ್ ಗೋಪಿ ವಿರುದ್ಧ ಮಹಿಳಾ ಪತ್ರಕರ್ತೆ ಕಾನೂನು ಕ್ರಮ ಜರುಗಿಸಲು ಮುಂದಾಗಿದ್ದಾರೆ.


ಕೋಯಿಕ್ಕೋಡ್ ನಲ್ಲಿ ನಿನ್ನೆ ಮಾಧ್ಯಮಗೋಷ್ಠಿ ಇತ್ತು. ಆ ವೇಳೆ, ಸುರೇಶ್ ಗೋಪಿ ಅವರು ಮಹಿಳಾ ಪತ್ರಕರ್ತೆ ವಿರುದ್ಧ ಅನುಚಿತವಾಗಿ ವರ್ತಿಸಿದ್ದಾರೆಂಬ ಗಂಭೀರ ಆರೋಪ ಕೇಳಿಬಂದಿದೆ. ಪ್ರಶ್ನೆ ಕೇಳಿದ ಪತ್ರಕರ್ತೆಯ ಭುಜದ ಮೇಲೆ ಸುರೇಶ್ ಗೋಪಿ ಕೈ ಹಾಕಿದ್ದಾರೆ. ಪತ್ರಕರ್ತೆ ದೂರ ಸರಿದರೂ ಕೂಡ ಸುರೇಶ್ ಗೋಪಿ ತಮ್ಮ ಈ ವರ್ತನೆಯನ್ನು ಮುಂದುವರಿಸಿದ್ದಾರೆ. ವಿಡಿಯೋದಲ್ಲಿ ಈ ವರ್ತನೆ ಸ್ಪಷ್ಟವಾಗಿ ಕಂಡಿದೆ. ಪತ್ರಕರ್ತೆ ಈ ಸಂಬಂಧ ಕಾನೂನು ಕ್ರಮ ಜರುಗಿಸುವುದಾಗಿ ಹೇಳಿದ್ದಾರೆ.


ಈ ಬೆಳವಣಿಗೆಗಳ ಬಳಿಕ ಸುರೇಶ್ ಗೋಪಿ ತಮ್ಮ ಫೇಸ್ ಬುಕ್ ಖಾತೆ ಮೂಲಕ ಕ್ಷಮೆಯಾಚಿಸಿದ್ದಾರೆ. ಪತ್ರಕರ್ತರನ್ನು ಪ್ರೀತಿಯಿಂದ ನಡೆಸಿಕೊಂಡಿದ್ದು, ಮಗುವಿಗೆ ಯಾವುದೇ ರೀತಿಯ ನೋವಾಗಿದ್ದರೆ ಅಥವಾ ಮಾನಸಿಕ ತೊಂದರೆಯಾಗಿದ್ದರೆ ಕ್ಷಮೆಯಾಚಿಸುತ್ತೇನೆ ಎಂದು ಸುರೇಶ್ ಗೋಪಿ ತಮ್ಮ ಅಧಿಕೃತ ಫೇಸ್ ಬುಕ್ನಲ್ಲಿ ಬರೆದುಕೊಂಡಿದ್ದಾರೆ.

Join Whatsapp
Exit mobile version