ಕಾಶ್ಮೀರಿ ಮುಸ್ಲಿಮರ ಚರ್ಮ ಸುಲಿಯಿರಿ ಎಂದ ಬಿಜೆಪಿ ನಾಯಕನ ವಿರುದ್ಧ ಪ್ರಕರಣ ದಾಖಲು

Prasthutha|

ಶ್ರೀನಗರ : ಕಾಶ್ಮೀರಿ ಮುಸ್ಲಿಮರಿಗೆ ಹಲ್ಲೆಗೈದು ಜೀವಂತವಾಗಿ ಅವರ ಚರ್ಮ ಸುಲಿಯಿರಿ” ಎಂದು ತಮ್ಮ ಬೆಂಬಲಿಗರಿಗೆ ಕರೆ ನೀಡುತ್ತಿರುವ ಜಮ್ಮು ಕಾಶ್ಮೀರ ಬಿಜೆಪಿ ಕಾರ್ಯದರ್ಶಿ ವಿಕ್ರಮ್ ರಂಧಾವ ಅವರ ವೀಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಬೆನ್ನಲ್ಲೇ ಅವರ ವಿರುದ್ಧ ದ್ವೇಷದ ಭಾಷಣಕ್ಕಾಗಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ‌

- Advertisement -

ಇತ್ತೀಚೆಗೆ ಟೀಮ್ ಇಂಡಿಯಾ ವಿರುದ್ಧ ಪಾಕಿಸ್ತಾನ ಟಿ-20 ವರ್ಲ್ಡ್ ಕಪ್ ಪಂದ್ಯದಲ್ಲಿ ಜಯ ಗಳಿಸಿದ್ದಕ್ಕಾಗಿ ಪಾಕಿಸ್ತಾನದ ಜಯವನ್ನು ಸಂಭ್ರಮಿಸಿದ್ದಾರೆ ಎನ್ನಲಾದ ಕಾಶ್ಮೀರಿ ಮುಸ್ಲಿಮರ ವಿರುದ್ಧ ಬಿಜೆಪಿ ನಾಯಕ ಹಿಂಸೆಗೆ ಕರೆ ನೀಡಿದ್ದರೆಂದು ಆರೋಪಿಸಲಾಗಿದೆ. ಕಳೆದ ವಾರ ಜಮ್ಮುವಿನಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ರಂಧಾವ ಈ ಹೇಳಿಕೆ ನೀಡಿದ್ದಾರೆನ್ನಲಾಗಿದ್ದು ಅವರು ವಿರುದ್ಧ ಕ್ರಮವೇಕಿಲ್ಲ ಎಂದು ಜಮ್ಮು ಕಾಶ್ಮೀರದ ಹಲವು ರಾಜಕೀಯ ನೇತಾರರು ಪ್ರಶ್ನಿಸಿದ್ದರು.

ಜಮ್ಮುವಿನ ಬಹು ಠಾಣೆಯಲ್ಲಿ ರಂಧಾವ ವಿರುದ್ಧ ಐಪಿಸಿ ಸೆಕ್ಷನ್ 295ಎ ಹಾಗೂ 505(2) ಅನ್ವಯ ಪ್ರಕರಣ ದಾಖಲಿಸಲಾಗಿದೆ. ಅವರ ವಿರುದ್ಧ ಜಾಮೀನುರಹಿತ ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆಯಾದರೂ ಅವರನ್ನು ಪೊಲೀಸರು ಇನ್ನೂ ಬಂಧಿಸಿಲ್ಲ ಎಂದು ತಿಳಿದು ಬಂದಿದೆ .

Join Whatsapp