ಕಲಬುರಗಿ: ಪಿಎಸ್ ಐ ನೇಮಕಾತಿ ಪರೀಕ್ಷೆಯಲ್ಲಿ ನಡೆದ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ, ಬಿಜೆಪಿ ನಾಯಕಿ ದಿವ್ಯಾ ಹಾಗರಗಿ ಸೇರಿ ಐವರನ್ನು ಸಿಐಡಿ ಅಧಿಕಾರಿಗಳು ಶುಕ್ರವಾರ ಮಧ್ಯಾಹ್ನ ಕಲಬುರಗಿಗೆ ಕರೆತಂದರು.
ದಿವ್ಯಾ ಹಾಗರಗಿ ಒಡೆತನದ ಕಲಬುರಗಿಯ ಜ್ಞಾನಜ್ಯೋತಿ ಇಂಗ್ಲಿಷ್ ಮಾಧ್ಯಮ ಶಾಲೆಯ ಶಿಕ್ಷಕಿಯರಾದ ಅರ್ಚನಾ, ಸುನಿತಾ, ದಿವ್ಯಾ ಅವರಿಗೆ ಆಶ್ರಯ ನೀಡಿದ್ದ, ಮಹಾರಾಷ್ಟ್ರದ ಸೊಲ್ಲಾಪುರದ ಮರಳು ವ್ಯಾಪಾರಿಗಳಾದ ಸುರೇಶ ಕಾಟೇಗಾಂವ ಹಾಗೂ ಕಾಳಿದಾಸ ಬಂಧಿತರು. ಎಲ್ಲರನ್ನೂ ಸಿಐಡಿ ಅಧಿಕಾರಿಗಳು ಶುಕ್ರವಾರ ಮಧ್ಯಾಹ್ನ ಕಲಬುರಗಿಗೆ ಕರೆತಂದರು.