ಕಲಬುರಗಿ | ಬಿಜೆಪಿ ಮುಖಂಡ ಗಿರೀಶ್ ಚಕ್ರ ಹತ್ಯೆ ಪ್ರಕರಣ: ಆರೋಪಿಗಳ ಬಂಧನ

Prasthutha|

ಕಲಬುರಗಿ: ಸಂಸದ ಡಾ. ಉಮೇಶ್​ ಜಾಧವ್​ ಬೆಂಬಲಿಗ, ಬಿಜೆಪಿ ಮುಖಂಡ ಗಿರೀಶ್ ಚಕ್ರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಕಲಬುರಗಿ ಜಿಲ್ಲೆಯ ಗಾಣಗಾಪುರ ಪೊಲೀಸರು ಬಂಧಿಸಿದ್ದಾರೆ.

- Advertisement -

ಬಂಧಿತರನ್ನು ಸಚಿನ್ ಕಿರಸಾವಳಗಿ, ವಿಶ್ವನಾಥ ಅಲಿಯಾಸ್ ಕುಮ್ಯಾ, ಪ್ರಜ್ವಲ್ ಎಂದು ಗುರುತಿಸಲಾಗಿದೆ.

ಫೆಬ್ರವರಿ 29ರಂದು ಪಾರ್ಟಿ ಕೊಡುವ ನೆಪದಲ್ಲಿ ಗಿರೀಶ್ ಚಕ್ರ ಅವರನ್ನು ಕರೆದು ಹತ್ಯೆ ಮಾಡಲಾಗಿತ್ತು. ಕಣ್ಣಿಗೆ ಖಾರದ ಪುಡಿ ಎರಚಿ ಭೀಕರವಾಗಿ ಕೊಲೆ ಮಾಡಲಾಗಿತ್ತು. ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಸಾಗನೂರ ಗ್ರಾಮದ ಜಮೀನಿನಲ್ಲಿ ಈ ಕೃತ್ಯ ಎಸಗಲಾಗಿತ್ತು.

Join Whatsapp