ಚೆನ್ನೈ: ಬಿಜೆಪಿ ಹಿಂದುಳಿದ ವಿಭಾಗದ ಚೆನ್ನೈ ಸೆಂಟ್ರಲ್ ಜಿಲ್ಲಾಧ್ಯಕ್ಷ ಬಾಲಚಂದ್ರನ್ ಅವರನ್ನು ಮೂವರು ಅಪರಿಚಿತರು ಹತ್ಯೆ ನಡೆಸಿರುವ ಘಟನೆ ತಮಿಳುನಾಡಿನ ಚಿಂತಾದ್ರಿಪೇಟ್ ನಿಂದ ವರದಿಯಾಗಿದೆ.
ಬಾಲಚಂದ್ರನ್ ಅವರಿಗೆ ಕೊಲೆ ಬೆದರಿಕೆಯಿದ್ದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಭದ್ರತೆಯನ್ನು ಏರ್ಪಡಿಸಿದ್ದು, ಅಧಿಕಾರಿ ಚಹಾ ಕುಡಿಯಲು ತೆರಳಿದ್ದಾಗ ಬಾಲಚಂದ್ರನ್ ಅವರ ಬಗ್ಗೆ ಮಾಹಿತಿಯನ್ನು ಕಲೆಹಾಕಿದ ಅಪರಿಚಿತರು ಬೈಕ್ ನಲ್ಲಿ ಬಂದು ಹತ್ಯೆ ಮಾಡಿ ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ.
ಪೂರ್ವದ್ವೇಷದ ಹಿನ್ನೆಲೆಯಲ್ಲಿ ಈ ಹತ್ಯೆ ನಡೆದಿದೆ ಎಂಬ ಶಂಕೆಯನ್ನು ಪ್ರತ್ಯಕ್ಷದರ್ಶಿಗಳು ವ್ಯಕ್ತಪಡಿಸಿದ್ದಾರೆ. ಆರೋಪಿಗಳ ಪತ್ತೆಗೆ ವಿಶೇಷ ತಂಡಗಳನ್ನು ರಚಿಸಿ, ಈ ಕುಕೃತ್ಯದ ಆರೋಪಿಗಳ ವಿರುದ್ಧ ಶೀಘ್ರ ಕ್ರಮ ಕೈಗೊಳ್ಳಲಾಗುವುದು ಎಂದು ಚೆನ್ನೈ ಪೊಲೀಸ್ ಕಮಿಷನರ್ ಶಂಕರ್ ಜಿವಾಲ್ ತಿಳಿಸಿದ್ದಾರೆ.