Home ಟಾಪ್ ಸುದ್ದಿಗಳು ಬಿಜೆಪಿ ಮುಖಂಡ, ವಕೀಲ ದೇವರಾಜೆಗೌಡ ಮತ್ತೆ 2 ದಿನ ಎಸ್‌ಐಟಿ ಕಸ್ಟಡಿಗೆ

ಬಿಜೆಪಿ ಮುಖಂಡ, ವಕೀಲ ದೇವರಾಜೆಗೌಡ ಮತ್ತೆ 2 ದಿನ ಎಸ್‌ಐಟಿ ಕಸ್ಟಡಿಗೆ

ಹಾಸನ: ಜಿಲ್ಲೆಯ 5ನೇ ಸಿವಿಲ್ ಕೋರ್ಟ್‌ನಲ್ಲಿ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ನ್ಯಾಯಾಧೀಶರು, ಬಿಜೆಪಿ ಮುಖಂಡ ದೇವರಾಜೆಗೌಡಗೆ ಮತ್ತೆ ಎರಡು ದಿನ ಎಸ್‌ಐಟಿ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದ್ದಾರೆ.

ಮತ್ತೆ 2 ದಿನ SIT ಕಸ್ಟಡಿಗೆ ನೀಡಿದ ಕೋರ್ಟ್, ಮೇ 20ರ ಸಂಜೆ 5 ಗಂಟೆಗೆ ಕೋರ್ಟಿಗೆ ಹಾಜರುಪಡಿಸುವಂತೆ ಕೋರ್ಟ್ ಆದೇಶಿಸಿದೆ.

ಪೆನ್ ಡ್ರೈವ್ ಕೇಸ್ ನಲ್ಲಿ ದೇವರಾಜೇಗೌಡ ಎಂಟನೇ ಆರೋಪಿಯಾಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ದೇವರಾಜೇಗೌಡ ನನ್ನು ಒಂದು ದಿನ ಎಸ್‌ಐಟಿ ವಶಕ್ಕೆ ಕೋರ್ಟ್ ನೀಡಿತ್ತು. ಇದೀಗ ಎಸ್‌ಐಟಿ ಕಸ್ಟಡಿ ಅಂತ್ಯವಾದ ಹಿನ್ನೆಲೆಯಲ್ಲಿ ಅಧಿಕಾರಿಗಳು ದೇವರಾಜೆಗೌಡನನ್ನು ಕೋರ್ಟಿಗೆ ಕರೆತಂದಿದ್ದರು.

Join Whatsapp
Exit mobile version