ಬಿಜೆಪಿ ಮುಖಂಡ ಮಣಿಕಂಠ ರಾಠೋಡ್‌ ಬಂಧನ

Prasthutha|

ಕಲಬುರಗಿ: ಚುನಾವಣೆ ಸಂದರ್ಭದಲ್ಲಿ ನೀತಿ ಸಂಹಿತೆ ಉಲ್ಲಂಘಿಸಿದ ಪ್ರಕರಣದಲ್ಲಿ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್‌ನನ್ನು ಪೊಲೀಸರು ಬಂಧಿಸಿ ನಂತರ ಬಿಡುಗಡೆ ಮಾಡಿರುವ ಘಟನೆ ನಡೆದಿದೆ.

- Advertisement -

ಚುನಾವಣಾ ಸಂದರ್ಭದಲ್ಲಿನ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣದಲ್ಲಿ ಚಿತ್ತಾಪುರ ಪೊಲೀಸರು ಬಂಧಿಸಿದ್ದರು. ರಾತ್ರಿಯೇ ಸ್ಟೇಷನ್ ಬೇಲ್‌ ಮೇಲೆ ಮಣಿಕಂಠ ರಾಠೋಡ್‌ ಹೊರಬಂದಿದ್ದಾರೆ.

ಇನ್ನೊಂದೆಡೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕುಟುಂಬಕ್ಕೆ ಕೊಲೆ ಬೆದರಿಕೆ ಪ್ರಕರಣದ ತನಿಖೆಯನ್ನು ಪೊಲೀಸರು ಚುರುಕು ಗೊಳಿಸಿದ್ದಾರೆ. ಖರ್ಗೆ ಕುಟುಂಬ ಸಾಫ್ ಮಾಡುವುದಾಗಿ ಮಣಿಕಂಠ ಹೇಳಿದ್ದ ಎನ್ನಲಾದ ಆಡಿಯೋ ಚುನಾವಣೆ ಸಂದರ್ಭದಲ್ಲಿ ತೀವ್ರ ಸಂಚಲನ ಸೃಷ್ಟಿಸಿತ್ತು.

- Advertisement -

ಇದೀಗ ಚಿತ್ತಾಪುರ ಪೊಲೀಸರು ಈ ಪ್ರಕರಣದ ತನಿಖೆ ಚುರುಕುಗೊಳಿಸಿದ್ದಾರೆ. ಈ ಪ್ರಕರಣದಲ್ಲಿ ರಾಠೋಡ್‌ ನ್ಯಾಯಾಲಯದಿಂದ ನಿರೀಕ್ಷಣಾ ಜಾಮೀನು ಪಡೆದಿದ್ದಾರೆ. ಅದಾಗ್ಯೂ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಣಿಕಂಠ ರಾಠೋಡ್‌ಗೆ ಪೊಲೀಸರು ನೋಟಿಸ್‌ ನೀಡಿದ್ದಾರೆ.

ಈಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ನ ಪ್ರಿಯಾಂಕ್‌ ಖರ್ಗೆ ವಿರುದ್ಧ ಬಿಜೆಪಿ ಪಕ್ಷದಿಂದ ಸ್ಪರ್ಧಿಸಿ ರಾಠೋಡ್‌ ಸೋತಿದ್ದರು. ಪ್ರಿಯಾಂಕ್ ಖರ್ಗೆ ವಿರುದ್ಧ ತೊಡೆತಟ್ಟಿದ್ದ ಮಣಿಕಂಠ ರಾಠೋಡಗೆ ಇದೀಗ ಸಂಕಷ್ಟ ಎದುರಾಗಿದೆ.