ಅಲಪ್ಪುಝ: ಬಿಜೆಪಿ ಮುಖಂಡ ರಂಜಿತ್ ಶ್ರೀನಿವಾಸನ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 15 ಮಂದಿ ಆರೋಪಿಗಳಿಗೆ ಕೇರಳ ನ್ಯಾಯಾಲಯ ಮಂಗಳವಾರ ಮರಣದಂಡನೆ ಶಿಕ್ಷೆ ವಿಧಿಸಿದೆ.
ಡಿಸೆಂಬರ್ 19, 2021ರಂದು ಬಿಜೆಪಿ ಒಬಿಸಿ ವಿಭಾಗದ ನಾಯಕ ರಂಜಿತ್ ಶ್ರೀನಿವಾಸನ್ ಅವರ ಹತ್ಯೆಗೆ ಸಂಬಂಧಿಸಿದಂತೆ ನೈಸಮ್, ಅಜ್ಮಲ್, ಅನೂಪ್, ಮುಹಮ್ಮದ್ ಅಸ್ಲಂ, ಅಬ್ದುಲ್ ಕಲಾಂ ಅಲಿಯಾಸ್ ಸಲಾಂ, ಅಬ್ದುಲ್ ಕಲಾಮ್, ಸಫ್ರುದ್ಧೀನ್, ಮನ್ಷದ್, ಜಸೀಬ್ ರಾಜಾ, ನವಾಸ್, ಸಮೀರ್, ನಝೀರ್, ಝಾಕಿರ್ ಹುಸೈನ್, ಶಾಜಿ ಪೂವತ್ತುಂಗಲ್ ಹಾಗೂ ಶ್ರೇನಸ್ ಅಶ್ರಫ್ ಸೇರಿದಂತೆ ಎಲ್ಲ ಆರೋಪಿಗಳನ್ನೂ ದೋಷಿಗಳೆಂದು ನ್ಯಾಯಾಲಯವು ಘೋಷಿಸಿದೆ.
ಕೇರಳದಲ್ಲಿ ಇದೇ ಮೊದಲ ಬಾರಿಗೆ ಒಂದೇ ಪ್ರಕರಣದಲ್ಲಿ ಇಷ್ಟು ಮಂದಿಗೆ ಮರಣದಂಡನೆ ವಿಧಿಸಲಾಗಿದೆ.