Home ರಾಷ್ಟ್ರೀಯ ಬಿಜೆಪಿ ನಾಯಕಿ ಸನಾ ಖಾನ್ ಹತ್ಯೆ ಪ್ರಕರಣ: ಪತಿ ಅಮಿತ್ ಸಾಹು ಬಂಧನ

ಬಿಜೆಪಿ ನಾಯಕಿ ಸನಾ ಖಾನ್ ಹತ್ಯೆ ಪ್ರಕರಣ: ಪತಿ ಅಮಿತ್ ಸಾಹು ಬಂಧನ

ನಾಗ್ಪುರ: ಬಿಜೆಪಿ ನಾಯಕಿ ಸನಾ ಖಾನ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪತಿ ಅಮಿತ್ ಸಾಹು ಅವರನ್ನು ಮಧ್ಯಪ್ರದೇಶದ ಜಬಲ್ಪುರದಲ್ಲಿ ನಾಗ್ಪುರ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.

ಪತ್ನಿಯನ್ನು ಕೊಂದಿರುವ ಬಗ್ಗೆ ಅಮಿತ್ ಸಾಹು ಒಪ್ಪಿಕೊಂಡಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಬಲ್ಪುರದ ಘೋರಾ ಬಜಾರ್ ಪ್ರದೇಶದಲ್ಲಿ ಮತ್ತೊಬ್ಬ ವ್ಯಕ್ತಿಯನ್ನು ಬಂಧಿಸಿದ್ದಾರೆ. ಪೊಲೀಸ್‌ ವರದಿ ಪ್ರಕಾರ ಅಮಿತ್ ಸಾಹು ಅವರು ಸನಾ ಖಾನ್ ಅವರನ್ನು ಕೊಂದು ದೇಹವನ್ನು ನದಿಗೆ ಎಸೆದಿದ್ದರೆ. ಆದರೆ, ಅವರ ದೇಹ ಇನ್ನು ಪತ್ತೆಯಾಗಿಲ್ಲ. ಮೃತದೇಹವನ್ನು ಪತ್ತೆ ಮಾಡುವ ಕಾರ್ಯಚರಣೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.

Join Whatsapp
Exit mobile version