ಬ್ರಾಹ್ಮಣ, ಬನಿಯಾ ಸಮುದಾಯ ನನ್ನ ಜೇಬಿನಲ್ಲಿದೆ: ವಿವಾದಾತ್ಮಕ ಹೇಳಿಕೆ ನೀಡಿದ ಬಿಜೆಪಿ ನಾಯಕ

Prasthutha|

ಅವಹೇಳನಕಾರಿ ಹೇಳಿಕೆಗೆ ಕ್ಷಮೆಯಾಚಿಸುವಂತೆ ಕಾಂಗ್ರೆಸ್ ಒತ್ತಾಯ

- Advertisement -

ಭೋಪಾಲ್: ಬ್ರಾಹ್ಮಣ ಮತ್ತು ಬನಿಯಾ ಸಮುದಾಯಗಳು ನನ್ನ ಜೇಬಿನಲ್ಲಿವೆ ಎಂಬ ಬಿಜೆಪಿ ನಾಯಕ ಪಿ ಮರಳೀಧರ್ ರಾವ್ ಅವರು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಈ ಹೇಳಿಕೆಯು ಮಧ್ಯಪ್ರದೇಶದ ರಾಜಕೀಯದಲ್ಲಿ ಭಾರೀ ಸಂಚಲನ ಮೂಡಿಸಿದೆ. ಘಟನೆಯ ಕುರಿತು ಪ್ರತಿಕ್ರಿಯಿಸಿದ ಪ್ರತಿಪಕ್ಷ ಕಾಂಗ್ರೆಸ್ ಕ್ಷಮೆಯಾಚಿಸುವಂತೆ ಒತ್ತಾಯಿಸಿದೆ.

- Advertisement -

ಮಾತ್ರವಲ್ಲ ಆಡಳಿತರೂಢ ಬಿಜೆಪಿಯನ್ನು ತರಾಟೆಗೆ ತೆಗೆದ ಕಾಂಗ್ರೆಸ್, ಉಭಯ ಸಮುದಾಯಗಳ ಮೇಲೆ ಹಕ್ಕು ಸಾಧಿಸಲು ಹೊರಟಂತಿದೆ ಎಂದು ಆರೋಪಿಸಿದೆ.

ಈ ಮಧ್ಯೆ ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ಪ್ರಧಾನ ಕಾರ್ಯದರ್ಶಿ, ಪಕ್ಷದ ರಾಜ್ಯ ಉಸ್ತುವಾರಿಯಾಗಿರುವ ಮುರಳೀಧರ್ ರಾವ್, ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿರುವ 3 ನಿಮಿಷದ ತಮ್ಮ ಹೇಳಿಕೆಯನ್ನು ತಿರುಚಲಾಗಿದೆ ಎಂದು ಹೇಳಿಕೆ ನೀಡುವ ಮೂಲಕ ಕಾಂಗ್ರೆಸ್ ಆರೋಪಕ್ಕೆ ತಿರುಗೇಟು ನೀಡಿದ್ದಾರೆ.

ಸಬ್ಕಾ ಸಾಥ್, ಸಬ್ಕಾ ವಿಕಾಸ್ ಎಂಬ ಬಿಜೆಪಿಯ ರಾಜಕೀಯ ಪ್ರೇರಿತ ಘೋಷಣೆಯು ಕೆಲವು ನಿರ್ದಿಷ್ಟ ಸಮುದಾಯಗಳನ್ನು ಕೇಂದ್ರೀಕರಿಸಿದೆ ಎಂಬ ವರದಿಗಾರರೊಬ್ಬರ ಹೇಳಿಕೆಗೆ ಪ್ರತಿಕ್ರಿಯಿಸಿದ ರಾವ್, ಬ್ರಾಹ್ಮಣ ಸಮುದಾಯ ನನ್ನ ಒಂದು ಜೇಬಿನಲ್ಲಿದ್ದರೆ, ಬನಿಯಾ ಇನ್ನೊಂದರಲ್ಲಿದೆ ಎಂಬ ವಿಚಿತ್ರ ಹೇಳಿಕೆ ನೀಡುವ ಮೂಲಕ ವಿವಾದಕ್ಕೊಳಗಾದರು. ಈ ಮಧ್ಯೆ ತನ್ನ ಮಾತನ್ನು ವರದಿಗಾರರು ಕೇಳುತ್ತಿಲ್ಲ ಎಂದು ಆರೋಪಿಸಿ ಪತ್ರಕರ್ತರನ್ನು ಗದರಿಸಿದ ಘಟನೆ ಕೂಡ ಸುದ್ದಿಗೋಷ್ಟಿಯಲ್ಲಿ ನಡೆಯಿತು.

ಪ್ರಸಕ್ತ ರಾವ್ ಅವರ ಹೇಳಿಕೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಕಾಂಗ್ರೆಸ್ ನ ಮಾಜಿ ಮುಖ್ಯಮಂತ್ರಿ ಕಮಲ್ ನಾಥ್ “ ಬಿಜೆಪಿ ಪಕ್ಷ ಅಧಿಕಾರದ ದಾಹಕ್ಕೆ ಒಳಗಾಗಿದೆ ಎಂದು ಆರೋಪಿಸಿದರಲ್ಲದೆ, ಉಭಯ ಸಮುದಾಯಗಳಲ್ಲಿ ಕ್ಷಮೆಯಾಚಿಸಬೇಕೆಂದು ಒತ್ತಾಯಿಸಿದ್ದಾರೆ.



Join Whatsapp