ಬೆಂಗಳೂರು: ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡರ ಆಶೀರ್ವಾದ ನಮಗೆ ಆನೆ ಬಲ ತಂದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿದರು.
ಬಿಜೆಪಿ ಜೆಡಿಎಸ್ ಸಮನ್ವಯ ಸಭೆ ಬಳಿಕ ಮಾತನಾಡಿದ ಅವರು, ಈ ಸಭೆ ಬಹಳ ಹಿಂದೆಯೇ ಆಗಬೇಕಾಗಿತ್ತು. ಈ ಸಮ್ಮಿಲನ ಸುವರ್ಣಾಕ್ಷರದಲ್ಲಿ ಬರೆದಿಡುವ ಫಲಿತಾಂಶ ಆಗಲಿದೆ. ಹಿಂದೆಯೂ ಬಿಜೆಪಿ ಹಾಗೂ ಜೆಡಿಎಸ್ ಮಧ್ಯೆ ಹೊಂದಾಣಿಕೆ ಆಗಿತ್ತು. ಆದರೆ ಸೈದ್ದಾಂತಿಕ ನೆಲೆಗಟ್ಟಿನಲ್ಲಿ ಅಂದಿನ ಕಾಲಘಟ್ಟದಲ್ಲಿ ದೇವೇಗೌಡರ ಸಮ್ಮತಿ ಇರಲಿಲ್ಲ ಎಂಬುದೂ ಗೊತ್ತಿರುವ ವಿಚಾರ. ಇದೀಗ ಮೋದಿ ಮತ್ತೊಮ್ಮೆ ಪ್ರಧಾನಿ ಆಗಬೇಕೆಂದು ದೇವೇಗೌಡರು ಆಶೀರ್ವಾದ ಮಾಡಿರುವುದು ಆನೆ ಬಲ ತಂದಿದೆ ಎಂದು ಹೇಳಿದರು.