ಮಡಿಕೇರಿಯಲ್ಲಿ ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆದದ್ದು ಬಿಜೆಪಿ ನಾಯಕ: ವೀಡಿಯೋ ವೈರಲ್

Prasthutha|

ಮಡಿಕೇರಿ: ಕೊಡಗಿನ ಬಿಜೆಪಿ ಮುಖಂಡ ಮಡಿಕೇರಿಯ ಜನರಲ್ ತಿಮ್ಮಯ್ಯ ವೃತ್ತದಲ್ಲಿ ಮಾಜಿ ಸಿ.ಎಂ ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆದಿರುವ ವೀಡಿಯೋ ವೈರಲ್ ಆಗಿದೆ.

- Advertisement -

ಸಿದ್ದರಾಮಯ್ಯ ಕೊಡಗಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಜಿಲ್ಲೆಯ ಎರಡು ಪ್ರದೇಶಗಳಲ್ಲಿ ಕಾರಿನ ಮೇಲೆ ಮೊಟ್ಟೆ ಎಸೆಯಲಾಗಿದ್ದು, ಮೊದಲು‌ ಮಡಿಕೇರಿಯಲ್ಲಾಗಿತ್ತು.

ಮಡಿಕೇರಿ ನಗರಸಭೆಯ ಬಿಜೆಪಿ ಸದಸ್ಯ ಕವನ್ ಕಾವೇರಪ್ಪ ಸಿದ್ದು ಕಾರಿನ ಮೇಲೆ ಮೊಟ್ಟೆ ಎಸೆಯುತ್ತಿರುವ ವೀಡಿಯೋಗಳು ವೈರಲ್ ಆಗಿದೆ.

- Advertisement -

ಗುಡ್ಡೆಹೊಸೂರಿನಲ್ಲಿ ಮೊಟ್ಟೆ ಎಸೆದ ಸಂಘಪರಿವಾರ ಕಾರ್ಯಕರ್ತನನ್ನು ಕಾಂಗ್ರೆಸ್ ಪಕ್ಷದ ಕಾರ್ಯಕರ್ತ ಎಂದು ಹೇಳಿದ್ದ ಕೊಡಗು ಬಿಜೆಪಿ, ಈಗ ಬಿಜೆಪಿ ನಗರಸಭಾ ಸದಸ್ಯನನ್ನೂ ಕಾಂಗ್ರೆಸ್ ಸದಸ್ಯ ಎಂದು ಹೇಳುತ್ತಾರಾ ಎಂದು ನೆಟ್ಟಿಗರು ಪ್ರಶ್ನಿಸಿದ್ದಾರೆ.

Join Whatsapp