Home ಟಾಪ್ ಸುದ್ದಿಗಳು ಮಡಿಕೇರಿಯಲ್ಲಿ ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆದದ್ದು ಬಿಜೆಪಿ ನಾಯಕ: ವೀಡಿಯೋ ವೈರಲ್

ಮಡಿಕೇರಿಯಲ್ಲಿ ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆದದ್ದು ಬಿಜೆಪಿ ನಾಯಕ: ವೀಡಿಯೋ ವೈರಲ್

ಮಡಿಕೇರಿ: ಕೊಡಗಿನ ಬಿಜೆಪಿ ಮುಖಂಡ ಮಡಿಕೇರಿಯ ಜನರಲ್ ತಿಮ್ಮಯ್ಯ ವೃತ್ತದಲ್ಲಿ ಮಾಜಿ ಸಿ.ಎಂ ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆದಿರುವ ವೀಡಿಯೋ ವೈರಲ್ ಆಗಿದೆ.

ಸಿದ್ದರಾಮಯ್ಯ ಕೊಡಗಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಜಿಲ್ಲೆಯ ಎರಡು ಪ್ರದೇಶಗಳಲ್ಲಿ ಕಾರಿನ ಮೇಲೆ ಮೊಟ್ಟೆ ಎಸೆಯಲಾಗಿದ್ದು, ಮೊದಲು‌ ಮಡಿಕೇರಿಯಲ್ಲಾಗಿತ್ತು.

ಮಡಿಕೇರಿ ನಗರಸಭೆಯ ಬಿಜೆಪಿ ಸದಸ್ಯ ಕವನ್ ಕಾವೇರಪ್ಪ ಸಿದ್ದು ಕಾರಿನ ಮೇಲೆ ಮೊಟ್ಟೆ ಎಸೆಯುತ್ತಿರುವ ವೀಡಿಯೋಗಳು ವೈರಲ್ ಆಗಿದೆ.

ಗುಡ್ಡೆಹೊಸೂರಿನಲ್ಲಿ ಮೊಟ್ಟೆ ಎಸೆದ ಸಂಘಪರಿವಾರ ಕಾರ್ಯಕರ್ತನನ್ನು ಕಾಂಗ್ರೆಸ್ ಪಕ್ಷದ ಕಾರ್ಯಕರ್ತ ಎಂದು ಹೇಳಿದ್ದ ಕೊಡಗು ಬಿಜೆಪಿ, ಈಗ ಬಿಜೆಪಿ ನಗರಸಭಾ ಸದಸ್ಯನನ್ನೂ ಕಾಂಗ್ರೆಸ್ ಸದಸ್ಯ ಎಂದು ಹೇಳುತ್ತಾರಾ ಎಂದು ನೆಟ್ಟಿಗರು ಪ್ರಶ್ನಿಸಿದ್ದಾರೆ.

Join Whatsapp
Exit mobile version