ಬೆಂಗಳೂರು: ನಾನು ಕಾಂಗ್ರೆಸ್ ಸೇರಲು ನನ್ನ ತಂದೆ ಸಹಮತ ಇದೆ. ನನಗೆ ಇಷ್ಟವಾದ ಪಕ್ಷ ಸೇರುವ ಸ್ವಾತಂತ್ರ್ಯವನ್ನು ತಂದೆ ನನಗೆ ಕೊಟ್ಟಿದ್ದಾರೆ ಎಂದು ಬಿಜೆಪಿ ಮುಖಂಡ, ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಪುತ್ರಿ ನಿಶಾ ಯೋಗೇಶ್ವರ್ ಹೇಳಿದ್ದಾರೆ.
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ಸೇರ್ಪಡೆಗೆ ಸಿದ್ದಳಿದ್ದೇನೆ, ದಿನಾಂಕ ಇನ್ನೂ ನಿಗದಿ ಆಗಿಲ್ಲ ಎಂದು ತಿಳಿಸಿದ್ದಾರೆ. ಹಲವು ಬಾರಿ ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಸಂಸದ ಡಿಕೆ ಸುರೇಶ್ ಅವರನ್ನು ಭೇಟಿ ಮಾಡಿದ್ದ ನಿಶಾ ಯೋಗೇಶ್ವರ್ ಕಾಂಗ್ರೆಸ್ ಸೇರುವ ಬಗ್ಗೆ ಒಲವು ವ್ಯಕ್ತಪಡಿಸಿದ್ದರು.
ಇದರ ಬಗ್ಗೆ ಕಾಂಗ್ರೆಸ್ ಪಕ್ಷದಲ್ಲಿಯೂ ಕೂಡ ಚರ್ಚೆಗಳು ಆಗುತ್ತಿವೆ. ಈ ಬಗ್ಗೆ ಬೆಂಗಳೂರು ಗ್ರಾಮಾಂತರ ಸಂಸದ ಡಿಕೆ ಸುರೇಶ್ ಕೂಡ ಮಾಹಿತಿ ನೀಡಿದ್ದರು. ನಿಶಾ ಅವರು ಕಾಂಗ್ರೆಸ್ ಸೇರುವ ಬಗ್ಗೆ ಹಲವು ಬಾರಿ ಮಾತನಾಡಿದ್ದಾರೆ.