►ಬಿಜೆಪಿ ತೊರೆದು ಕಾಂಗ್ರೆಸ್’ಗೆ ಸೇರ್ಪಡೆಯಾದ 70ಕ್ಕೂ ಅಧಿಕ ಕಾರ್ಯಕರ್ತರು
ಸುರತ್ಕಲ್: ಬಿಜೆಪಿ ನಾಯಕರು ಅಭಿವೃದ್ಧಿ ಮಾಡುವುದನ್ನು ಬಿಟ್ಟು ಸಮಾಜದಲ್ಲಿ ಜಾತಿ, ಧರ್ಮಗಳ ನಡುವೆ ಧ್ವೇಷದ ಬೀಜ ಬಿತ್ತುತ್ತಿದ್ದಾರೆ ಎಂದು ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಇನಾಯತ್ ಅಲಿ ಆರೋಪಿಸಿದ್ದಾರೆ.
ಕಾವೂರಿನ ಶಾಂತಿನಗರದಲ್ಲಿ ಆಯೋಜಿಸಲಾಗಿದ್ದ ಯುವ ಕಾಂಗ್ರೆಸ್ ಕಾರ್ಯಕರ್ತರ ಸಭೆ ಮತ್ತು ಪಕ್ಷಕ್ಕೆ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕೋವಿಡ್ ಬಳಿಕ ಬೆಲೆ ಏರಿಕೆ, ಉದ್ಯೋಗ ಇಲ್ಲದೆ ವಿದ್ಯಾವಂತರು ಕಂಗೆಟ್ಟು ಹೋಗಿದ್ದಾರೆ. ಬಿಜೆಪಿಯ ಆಡಳಿತದಿಂದ ಜನರು ಬೇಸತ್ತು ಈ ಬಾರಿ ಕಾಂಗ್ರೆಸ್’ಗೆ ಅವಕಾಶ ನೀಡಬೇಕು ಎಂದು ಜನರು ಹೇಳುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.
ಇದೇ ಸಂದರ್ಭದಲ್ಲಿ ಬಿಜೆಪಿ ತೊರೆದು ಕಾಂಗ್ರೆಸ್’ಗೆ 70ಕ್ಕೂ ಹೆಚ್ಚು ಯುವಕರು ಸೇರ್ಪಡೆಯಾದರು.