ಕೋವಿಡ್ ಹರಡುವ ಬಿಜೆಪಿ ನಾಯಕರಿಗೆ ಬಂಗಾಳ ಪ್ರವೇಶಕ್ಕೆ ನೆಗೆಟಿವ್ ವರದಿ ಕಡ್ಡಾಯ : ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ

Prasthutha|

ಕೋಲ್ಕತ್ತಾ : ಪದೇ ಪದೇ ಬಂಗಾಳಕ್ಕೆ ಭೇಟಿ ನೀಡುತ್ತಿರುವ ಬಿಜೆಪಿ ನಾಯಕರು ಕಡ್ಡಾಯವಾಗಿ ಕೋವಿಡ್‌ ನೆಗೆಟಿವ್‌ ವರದಿಯನ್ನು ಹೊಂದಿರಬೇಕು ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆದೇಶಿಸಿದ್ದಾರೆ. ರಾಜ್ಯಕ್ಕೆ ಆಗಮಿಸುತ್ತಿರುವ ಬಿಜೆಪಿ ನಾಯಕರು ಸಾಂಕ್ರಾಮಿಕ ರೋಗವನ್ನು ವ್ಯಾಪಕವಾಗಿ ಹರಡುತ್ತಿದ್ದಾರೆ ಎಂದು ಅವರು ತನ್ನ ಹೇಳಿಕೆಯಲ್ಲಿ ತಿಳಿಸಿದ್ದಾರೆ.

- Advertisement -

ಪದೇ ಪದೇ ರಾಜ್ಯಕ್ಕೆ ಆಗಮಿಸುತ್ತಿರುವ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಹಾಗೂ ವಿ ಮುರಳೀಧರನ್‌ ಕುರಿತು ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, “ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡುವ ಬಿಜೆಪಿ ನಾಯಕರು ಕಡ್ಡಾಯವಾಗಿ ಕೋವಿಡ್‌ ನೆಗೆಟಿವ್‌ ವರದಿಗಳನ್ನು ಹೊಂದಿರಬೇಕು. ನ್ಯಾಯ ಎಲ್ಲರಿಗೂ ಸಮಾನವಾಗಿರುವುದರಿಂದ ವಿಶೇಷ ವಿಮಾನದಲ್ಲಿ ಆಗಮಿಸುವುವ ನಾಯಕರಿಗೂ ಇದು ಅನ್ವಯವಾಗಿರುತ್ತದೆ. ಪದೇ ಪದೇ ರಾಜ್ಯಕ್ಕೆ ಭೇಟಿ ನೀಡುತ್ತಿರುವ ಬಿಜೆಪಿ ನಾಯಕರು ವ್ಯಾಪಕ ಕೋವಿಡ್‌ ಹರಡುತ್ತಿದ್ದಾರೆ” ಎಂದು ಹೇಳಿದ್ದಾರೆ.

Join Whatsapp