ಎಂಇಎಸ್‌ ಪ್ರತಿಭಟನೆಯಲ್ಲಿ ರಾಜ್ಯದ ಬಿಜೆಪಿ ಮುಖಂಡ ಭಾಗಿ: ವ್ಯಾಪಕ ಆಕ್ರೋಶ

Prasthutha|

ಬೆಳಗಾವಿ: ಇಲ್ಲಿನ ಎಂಇಎಸ್‌ ಕಾರ್ಯಕರ್ತರು ನಡೆಸಿದ ಪ್ರತಿಭಟನೆಯಲ್ಲಿ ಬಿಜೆಪಿಯ ರಾಜ್ಯ ಒಬಿಸಿ ಘಟಕದ ಕಾರ್ಯದರ್ಶಿ ಕಿರಣ್ ಜಾಧವ್ ಪಾಲ್ಗೊಂಡಿರೋದು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ.

- Advertisement -

ಎಂಇಎಸ್‌ ಕಾರ್ಯಕರ್ತರು ಮಹಾರಾಷ್ಟ್ರದಲ್ಲಿ ಕನ್ನಡದ ಧ್ವಜವನ್ನು ಸುಟ್ಟ ಪ್ರಕರಣ ಮಾಸುವ ಮುನ್ನವೇ ಇತ್ತ ಬೆಳಗಾವಿಯಲ್ಲಿ ಶುಕ್ರವಾರ ರಾತ್ರಿ ಸಂಗೊಳ್ಳಿ ರಾಯಣ್ಣ ಪ್ರತಿಮೆಯನ್ನು ಕಾರ್ಯಕರ್ತರು ಧ್ವಂಸಗೊಳಿಸಿದ್ದಾರೆ. ಇಂತಹ ಬೂದಿ ಮುಚ್ಚಿದ ಕೆಂಡದಂತಹ ಪರಿಸ್ಥಿತಿಯಲ್ಲಿ ಕರ್ನಾಟಕದ ಬಿಜೆಪಿ ಮುಖಂಡನೊಬ್ಬ ಎಂಇಎಸ್‌ ನಡೆಸುತ್ತಿರುವ ಪ್ರತಿಭಟನೆಯಲ್ಲಿ ಪಾಲ್ಗೊಂಡಿರೋದು ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿದೆ. ಬೆಳಗಾವಿಯ ಶಿವಾಜಿ ಗಾರ್ಡನ್‌ ನಲ್ಲಿರುವ ಶಿವಾಜಿ ಮೂರ್ತಿಗೆ ಪೂಜೆ ಸಲ್ಲಿಸಿದ ಬಿಜೆಪಿ ಮುಖಂಡ ಕಿರಣ್ ಜಾಧವ್, ಎಂಇಎಸ್‌ ಪ್ರತಿಭಟನೆಯಲ್ಲಿ ಪಾಲ್ಗೊಂಡಿರೋದು ಆಕ್ರೋಶಕ್ಕೆ ಕಾರಣವಾಗಿದೆ.

Join Whatsapp