ಬಿಜೆಪಿ ನಾಯಕನ ಲೈಂಗಿಕ ದೌರ್ಜನ್ಯದ ವೀಡಿಯೋ ವೈರಲ್: ಜಿಲ್ಲಾಧ್ಯಕ್ಷ ಸ್ಥಾನದಿಂದ ಶ್ರೀಕಾಂತ್ ಪದಚ್ಯುತಿ

Prasthutha|

ಮಹಿಳೆಗೆ ಹನಿಟ್ರ್ಯಾಪ್ ಆರೋಪದ ಮೇಲೆ FIR

- Advertisement -

ಮುಂಬೈ: ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಹಿನ್ನೆಲೆಯಲ್ಲಿ ವೀಡಿಯೋ ವೈರಲ್ ಆದ ಬೆನ್ನಲ್ಲೇ ಸೋಲಾಪುರ ಗ್ರಾಮಾಂತರ ಜಿಲ್ಲಾಧ್ಯಕ್ಷ ಶ್ರೀಕಾಂತ್ ದೇಶಮುಖ್ ಅವರನ್ನು ಮಹಾರಾಷ್ಟ್ರ ಬಿಜೆಪಿ ಪದಚ್ಯುತಿ ಮಾಡಿದೆ.

ಶ್ರೀಕಾಂತ್ ಹೋಟೆಲ್‌ನಲ್ಲಿ ಪಕ್ಷದ ಕಾರ್ಯಕರ್ತೆಗೆ ಕಿರುಕುಳ ನೀಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಲಾರಂಭಿಸಿದೆ. ಕ್ಲಿಪ್ ವೈರಲ್ ಆದ ನಂತರ, ಪಕ್ಷವು ಶ್ರೀಕಾಂತ್ ಅವರಿಗೆ ರಾಜೀನಾಮೆ ನೀಡುವಂತೆ ಒತ್ತಾಯಿಸಿದೆ. ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿ ಬಂದ ನಂತರ ತಮ್ಮ ಸ್ಥಾನಕ್ಕೆ ರಾಜೀನಾಮೆ ದೇಶ್ ಮುಖ್ ರಾಜೀನಾಮೆ ನೀಡಿದ್ದು, ರಾಜೀನಾಮೆಯನ್ನು ಮಹಾರಾಷ್ಟ್ರ ಬಿಜೆಪಿ ಅಧ್ಯಕ್ಷ ಚಂದ್ರಕಾಂತ್ದಾದ ಪಾಟೀಲ್ ಅಂಗೀಕರಿಸಿದ್ದಾರೆ.

- Advertisement -

ಇದೀಗ ಈ ಹುದ್ದೆಯನ್ನು ವಿಕ್ರಮ್ ದೇಶಮುಖ್ ಅವರಿಗೆ ತಾತ್ಕಾಲಿಕವಾಗಿ ಹಸ್ತಾಂತರಿಸಲಾಗಿದೆ ಎಂದು ವರದಿಯಾಗಿದೆ.  

ರಾಜ್ಯ ಬಿಜೆಪಿ ಉಪಾಧ್ಯಕ್ಷೆ ಚಿತ್ರಾ ವಾಘ್ ಮಾತನಾಡಿ, ಶ್ರೀಕಾಂತ್ ದೇಶಮುಖ್ ಅವರ ಕುರಿತಾದ ವಿಡಿಯೋ ಹೊರಬಿದ್ದಿದ್ದು, ಅವರು ರಾಜೀನಾಮೆ ನೀಡಿದ್ದಾರೆ.  ವೀಡಿಯೊ ಕ್ಲಿಪ್‌ನಲ್ಲಿ ಕಂಡುಬರುವ ಮಹಿಳೆ ಮುಂದೆ ಬಂದು ಪೊಲೀಸ್ ದೂರು ನೀಡಬೇಕು. ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.

ಈ ನಡುವೆ, ಮುಂಬೈ ಪೊಲೀಸರು ವಿಡಿಯೋದಲ್ಲಿ ಕಂಡುಬರುವ ಮಹಿಳೆಯ ವಿರುದ್ಧ ಸುಲಿಗೆ ಆರೋಪದಡಿಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ. ಎರಡು ದಿನಗಳ ಹಿಂದೆ ದೇಶಮುಖ್ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಲಾಗಿದೆ ಎಂದು ಪಿಟಿಐ ವರದಿ ಮಾಡಿದೆ. ಶ್ರೀಕಾಂತ್ ಅವರು ಮಹಿಳೆಯಿಂದ “ಹನಿ-ಟ್ರ್ಯಾಪ್” ಆಗಿದ್ದಾರೆ ಎಂದು ಪ್ರತ್ಯಾರೋಪ ಮಾಡಿದ್ದರು.

ಪೊಲೀಸರು ಮಹಿಳೆಯ ವಿರುದ್ಧ ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 384 (ಸುಲಿಗೆ ಶಿಕ್ಷೆ) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಆದರೆ, ಇದುವರೆಗೂ ಯಾವುದೇ ಬಂಧನವಾಗಿಲ್ಲ. ಸೋಲಾಪುರ ಗ್ರಾಮಾಂತರ ಜಿಲ್ಲಾ ಬಿಜೆಪಿ ಮಾಜಿ ಅಧ್ಯಕ್ಷರು ತಮ್ಮೊಂದಿಗೆ ಅಕ್ರಮ ಸಂಬಂಧ ಹೊಂದಿದ್ದರು ಎಂದು ಮಹಿಳೆ ಹೇಳುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ಶ್ರೀಕಾಂತ್ ಮತ್ತೊಬ್ಬ ಮಹಿಳೆಯೊಂದಿಗೆ ಸಂಬಂಧ ಹೊಂದಿದ್ದರಿಂದ ತನಗೆ ಮೋಸ ಮಾಡಿದ್ದಾನೆ ಎಂದು ಆರೋಪಿಸಿದ್ದಾರೆ.

Join Whatsapp