Home ಟಾಪ್ ಸುದ್ದಿಗಳು ರಾಮ ಮಂದಿರ ಉದ್ಘಾಟನೆ | ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ ರಾಮನ ಶಾಪ ತಟ್ಟಲಿದೆ: ಹಿಂದೂ...

ರಾಮ ಮಂದಿರ ಉದ್ಘಾಟನೆ | ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ ರಾಮನ ಶಾಪ ತಟ್ಟಲಿದೆ: ಹಿಂದೂ ಮಹಾಸಭಾ

ಮಂಗಳೂರು: ಅಯೋಧ್ಯೆಯಲ್ಲಿ ರಾಮನ ಮಂದಿರವನ್ನು ಅಪೂರ್ಣಾವಸ್ಥೆಯಲ್ಲಿರುವಾಗ ಉದ್ಘಾಟನೆ ಮಾಡುತ್ತಿರುವುದು ಧರ್ಮಶಾಸ್ತ್ರಕ್ಕೆ ಮಾಡಿದ ಅಪಚಾರವಾಗಿದೆ ಎಂದು ಹಿಂದೂ ಮಹಾಸಭಾ ಕರ್ನಾಟಕದ ಸಂಸ್ಥಾಪಕ ರಾಜೇಶ್ ಪವಿತ್ರನ್ ಹೇಳಿದರು.


ಗುರುವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಮಚಂದ್ರನನ್ನು ಚುನಾವಣಾ ಸರಕನ್ನಾಗಿ ಮಾಡಿರುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ ಶ್ರೀರಾಮನ ಶಾಪ ತಟ್ಟುತ್ತದೆ. ಕರ್ನಾಟಕದಲ್ಲಿ ಆದ ಸ್ಥಿತಿಯೇ ಕೇಂದ್ರದಲ್ಲೂ ಆಗಬಹುದು’ ಎಂದರು.

Join Whatsapp
Exit mobile version