ಬಿಜೆಪಿ ರಾಮಮಂದಿರದ ಮೇಲೆ ಬಾಂಬ್ ಸ್ಫೋಟಿಸಿ ಮುಸ್ಲಿಮರನ್ನು ದೂಷಿಸುವ ಸಾಧ್ಯತೆಗಳಿವೆ : ಬಿಆರ್ ಪಾಟೀಲ್

Prasthutha|

ದೆಹಲಿ: ಮುಂದಿನ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಹಿಂದೂಗಳ ಮತಗಳನ್ನು ಸೆಳೆಯಲು ಬಿಜೆಪಿ ರಾಮಮಂದಿರದ ಮೇಲೆ ಬಾಂಬ್ ಸ್ಫೋಟಿಸಿ ಮುಸ್ಲಿಂ ಸಮುದಾಯದ ಮೇಲೆ ದೂಷಿಸುವ ಸಾಧ್ಯತೆಗಳಿವೆ ಎಂದು ಕಾಂಗ್ರೆಸ್ ಶಾಸಕ ಬಿಆರ್ ಪಾಟೀಲ್ ಹೇಳಿದ್ದಾರೆ.

- Advertisement -


ಕರ್ನಾಟಕದ ಆಳಂದದ ಕಾಂಗ್ರೆಸ್ ಶಾಸಕರಾಗಿರುವ ಪಾಟೀಲ್, “2024 ರ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಗೆಲುವನ್ನು ಖಚಿತಪಡಿಸಿಕೊಳ್ಳಲು, ಬಿಜೆಪಿಯವರು ರಾಮ ಮಂದಿರದ ಮೇಲೆ ಬಾಂಬ್ ಹಾಕಿ ಮುಸ್ಲಿಮರನ್ನು ದೂರುತ್ತಾರೆ ಎಂದು ಹೇಳಿರುವ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.


ಸಾಮಾಜಿಕ ಮಾಧ್ಯಮ ಎಕ್ಸ್ ನಲ್ಲಿ ಪಾಟೀಲ್ ಹೇಳಿಕೆಯ ವಿಡಿಯೊವನ್ನು ಹಂಚಿಕೊಂಡ ಬಿಜೆಪಿಯ ಕರ್ನಾಟಕ ಘಟಕ , ಕಾಂಗ್ರೆಸ್ ಹಿಂದೂಗಳು ಮತ್ತು ಮುಸ್ಲಿಮರ ನಡುವೆ ಕೋಮು ಉದ್ವಿಗ್ನತೆಯನ್ನು ಉಂಟುಮಾಡಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದೆ.