Home ಟಾಪ್ ಸುದ್ದಿಗಳು ಬಿಜೆಪಿ 200 ಸೀಟ್ ಗೆಲ್ಲುವುದು ಅನುಮಾನವಿದೆ, ಸಮೀಕ್ಷೆಯಿಂದಲೇ ಈ ವಿಚಾರ ಬಹಿರಂಗವಾಗಿದೆ: ಸಿಎಂ ಸಿದ್ದರಾಮಯ್ಯ

ಬಿಜೆಪಿ 200 ಸೀಟ್ ಗೆಲ್ಲುವುದು ಅನುಮಾನವಿದೆ, ಸಮೀಕ್ಷೆಯಿಂದಲೇ ಈ ವಿಚಾರ ಬಹಿರಂಗವಾಗಿದೆ: ಸಿಎಂ ಸಿದ್ದರಾಮಯ್ಯ

ಮೈಸೂರು: ಈ ಚುನಾವಣೆಯಲ್ಲಿ ಬಿಜೆಪಿ 200 ಸೀಟ್ ಗೆಲ್ಲುವುದು ಅನುಮಾನವಿದೆ. ಬಿಜೆಪಿಯ ಸಮೀಕ್ಷೆಯಿಂದಲೇ ಈ ವಿಚಾರ ಬಹಿರಂಗವಾಗಿದೆ. ಹೀಗಾಗಿ ಅವರು 400 ಸೀಟ್ ಗೆಲ್ಲುತ್ತೇವೆಂದು ಬಿಂಬಿಸುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.


ಮೈಸೂರಿನಲ್ಲಿ ಮಾತನಾಡಿದ ಅವರು, ಕಡಿಮೆ ಸ್ಥಾನ ಬರುತ್ತದೆ ಎಂದು ಗೊತ್ತಾದ ಮೇಲೆಯೇ ಹೆಚ್ಚು ಸ್ಥಾನ ಬರುತ್ತವೆಂದು ಬಿಂಬಿಸುವ ಪ್ರಯತ್ನ ಮಾಡುತ್ತಿದ್ದಾರೆ. ಇದು ಕೂಡ ಅವರ ತಂತ್ರಗಾರಿಕೆ. ಕರ್ನಾಟಕದಲ್ಲಿ ನನಗೆ ವಿಶ್ವಾಸ ಇದೆ. 18ರಿಂದ 20 ಸ್ಥಾನ ಗೆಲ್ಲುತ್ತೇವೆ ಎಂದು ಸಿದ್ದರಾಮಯ್ಯ ಹೇಳಿದರು.


ಈ ಬಾರಿ ಬಿಜೆಪಿಯ ಸುಳ್ಳಿಗೆ ಯಾರು ಸಹ ಮರಳಾಗುವುದಿಲ್ಲ. ಮೋದಿಯೂ ಬಂದು ಪ್ರಚಾರ ಮಾಡಲಿ. ವಿಧಾನಸಭೆ ಚುನಾವಣೆಯಲ್ಲಿ ಮೋದಿ ಪ್ರಚಾರ ಮಾಡಿದ್ದರು. ಆಗ ಏನಾಯಿತು ಎಂಬುದು ಗೊತ್ತಿದೆ. ಈಗಲೂ ಮಾಡಲಿ ಬಿಡಿ ಎಂದು ಅವರು ಹೇಳಿದರು.

Join Whatsapp
Exit mobile version